ಸಿದ್ಧಾಪುರ: ಅರಣ್ಯವಾಸಿಗಳಿಂದ ಅರಣ್ಯ ರಕ್ಷಣೆ, ಪರಿಸರ ಜಾಗೃತೆ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಹಮ್ಮಿಕೊಂಡ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನಕ್ಕೆ ಸಿದ್ಧಾಪುರ ತಾಲೂಕಿನ, ಶಿರಳಗಿ ಗ್ರಾಮ ಪಂಚಾಯತಿಯಲ್ಲಿ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಜುಲೈ 31, ಮುಂಜಾನೆ 10 ಗಂಟೆಗೆ ಚಾಲನೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದಲ್ಲಿ ಸಿದ್ಧಾಪುರ ತಾಲೂಕಾದ್ಯಂತ ಜುಲೈ 31ರಂದು 90ಕ್ಕೂ ಮಿಕ್ಕಿ ಹಳ್ಳಿಗಳಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ಅವರು ತಿಳಿಸುತ್ತಾ, ಅರಣ್ಯವಾಸಿಗಳು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅವರು ಕೋರಿದ್ದಾರೆ.