Slide
Slide
Slide
previous arrow
next arrow

ಶವ ಸಂಸ್ಕಾರಕ್ಕೆ ಕಟ್ಟಿಗೆ ಪೂರೈಸಲು ರೂಪಾಲಿ ನಾಯ್ಕ ಆಗ್ರಹ

300x250 AD

ಕಾರವಾರ: ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಟ್ಟಿಗೆ ಡಿಪೋದಲ್ಲಿ ಶವ ಸಂಸ್ಕಾರಕ್ಕೂ ಕಟ್ಟಿಗೆ ಸಿಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಕೂಡಲೇ ಅಗತ್ಯತೆ ಇರುವವರಿಗೆ ಕಟ್ಟಿಗೆ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಆಗ್ರಹಿಸಿದ್ದಾರೆ.

ಭಾರೀ ಮಳೆ, ಪ್ರವಾಹದಿಂದ ಜನತೆ ತೊಂದರೆಗೊಳಗಾಗಿದ್ದಾರೆ. ಈ ನಡುವೆ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೂ ಕಟ್ಟಿಗೆ ದೊರೆಯದೆ ಕುಟುಂಬದವರು ಪರದಾಡುವಂತಾಗಿದೆ. ಯಾರಾದರೂ ನಿಧನರಾದಾಗ ಮೊದಲೆ ತಮ್ಮವರನ್ನು ಕಳೆದುಕೊಂಡ ನೋವಿನಲ್ಲಿ ಆ ಕುಟುಂಬದವರಿರುತ್ತಾರೆ. ಅಂತಹ ಸಂದರ್ಭದಲ್ಲಿ ಕಟ್ಟಿಗೆ ಸಿಗದೆ ಇನ್ನಷ್ಟು ಹತಾಶರಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ನೋಡಿ ಕಟ್ಟಿಗೆ ವ್ಯವಸ್ಥೆ ಮಾಡಬೇಕಾಗಿದೆ.

300x250 AD

ನಮ್ಮದು ಅರಣ್ಯವೇ ಹೆಚ್ಚಿರುವ ಜಿಲ್ಲೆ. ಈ ನಾಡಿಗೆ ಅರಣ್ಯ ಉತ್ಪನ್ನವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಲಾಗುತ್ತದೆ. ಈ ಜಿಲ್ಲೆಯಲ್ಲಿರುವ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಶವ ಸಂಸ್ಕಾರಕ್ಕೂ ಕಟ್ಟಿಗೆ ಬರ ಎದುರಾಗದಂತೆ ನೋಡಿಕೊಳ್ಳಬೇಕಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ಸಾರ್ವಜನಿಕರಿಗೆ ಕಟ್ಟಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top