ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ 530 ಪರೀಕ್ಷಾ ಕೇಂದ್ರಗಳಲ್ಲಿ 2021 ನೇ ಸಾಲಿನ ಸಿಇಟಿ ಪರೀಕ್ಷೆ ಯನ್ನು ಆಗಸ್ಟ್ 28, 29 ರಂದು ನಡೆಸುವುದಾಗಿ ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಜೊತೆಗೆ ಪರೀಕ್ಷೆ ನಡೆಸಲಾಗುವುದು. ಆ. 28 ರಂದು ಜೀವಶಾಸ್ತ್ರ, ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಆ. 29 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ ಎಂದು ಅವರು ಹೇಳಿದ್ದಾರೆ. ಹೊರನಾಡು ಹಾಗು ಗಡಿನಾಡಿನ ವಿದ್ಯಾರ್ಥಿಗಳಿಗೆ ಆ. 30 ರಂದು ಪರೀಕ್ಷೆ ನಡೆಯಲಿದೆ.
ಪರೀಕ್ಷೆ ಬರೆಯಲು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. 86 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿ ಮತ್ತು ಉಳಿದ 444 ಕೇಂದ್ರಗಳು ಉಳಿದ ಜಿಲ್ಲೆಗಳಲ್ಲಿವೆ ಎಂದು ಅವರು ಹೇಳಿದ್ದಾರೆ. ಹೊರನಾಡು, ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಆ. 30 ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ, ಮಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ.