ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.
ಲಾಲೂ ಯಾದವ್ ಹಾಗೂ ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಇದು 3 ನೇ ಬಾರಿಗೆ ವಶಕ್ಕೆ ಪಡೆಯುತ್ತಿದೆ. ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಕ್ಕೆ ಪಡೆಯುತ್ತಿದ್ದಾಗ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದರು. ಈಗ ಆ ವೀಡಿಯೋ ವೈರಲ್ ಆಗತೊಡಗಿದೆ.ಜಾರಿ ನಿರ್ದೇಶನಾಲಯದ ದಾಳಿ ಬೆನ್ನಲ್ಲೇ ಬಿಹಾರ ಬಿಜೆಪಿ ಮುಖ್ಯಸ್ಥ ಸಮರ್ಥ್ ಚೌಧರಿ ಪ್ರತಿಕ್ರಿಯೆ ನೀಡಿದ್ದು, ಈಗ ಆರ್ ಜೆಡಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಯು ಈ ಹಿಂದೆ ಮಾಜಿ ರೈಲ್ವೆ ಸಚಿವ ಲಾಲೂ ಅವರನ್ನು ಕ್ರಿಮಿನಲ್ ಎಂದು ಕರೆದಿತ್ತು ಅಷ್ಟೇ ಅಲ್ಲದೇ ಅವರು ರಾಜಕಾರಣ ಬಿಟ್ಟು ವಿಶ್ರಾಂತಿ ಪಡೆಯಬೇಕೆಂದು ಸಲಹೆ ನೀಡಿತ್ತು ಎಂಬುದನ್ನು ನೆನಪಿಸಿಕೊಂಡಿದ್ದಾರೆ.