ಮುಂಡಗೋಡ: ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲಾ, ರಾಜ್ಯ ಸರ್ಕಾರದ ಆದೇಶದಂತೆ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದ ಒಳಗೆ ಇಲ್ಲವೇ ತಮ್ಮ ಮನೆಯಗಳಲ್ಲಿಯೇ ಆಚರಿಸತಕ್ಕದ್ದು ಎಂದು ತಹಶೀಲ್ದಾರ ಶ್ರೀಧರ ಮುಂದಲಮನಿ ಹೇಳಿದರು.
ಅವರು ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಪ.ಪಂ ಸಭಾಭವನದಲ್ಲಿ ಶಾಂತಿ ಗುರುವಾರ ಪಾಲನಾ ಸಭೆ ನಡೆಯಲ್ಲಿ ಮತನಾಡಿದರು. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಸ್ಥಾಪಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಅಥವಾ ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‍ಗಳಲ್ಲಿ ವಿಸರ್ಜಿಸತಕ್ಕದ್ದು. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನ ನಿತ್ಯ ಸ್ಯಾನಿಟೈಜರ್ ಮಾಡುವುದು. ಭಕ್ತಾಧಿಗಳಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಯ್ಕಾನಿಂಗ ವ್ಯವಸ್ಥೆಯನ್ನು ಕಲ್ಪಿಸಬೇಕು.
ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ನಿಯಮಗಳಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸರ್ಕಾರದ ಎಲ್ಲಾ ಆದೇಶ- ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.
ಪಿ.ಎಸೈ ಬಸವರಾಜ ಮಬನೂರ ಮಾತನಾಡಿದರು. ಪಣಿರಾಜ ಹದಳಗಿ, ರವಿ ಹಾವೇರಿ, ಶೇಖರ ಲಮಾಣಿ, ಮಮ್ಮದಸಲಿಂ ನಂದಿಗಟ್ಟಿ, ಪಟ್ಟಣ ಮತ್ತು ತಾಲೂಕಿನ ಸುತ್ತಮುತ್ತಲಿನ ಹಿಂದು-ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.