• Slide
    Slide
    Slide
    previous arrow
    next arrow
  • ಕರ್ನಾಟಕ ಒನ್ ಕೇಂದ್ರಕ್ಕೆ ಶಾಸಕ ಆರ್.ವಿ.ಡಿ. ಭೇಟಿ

    300x250 AD

    ದಾಂಡೇಲಿ : ನಗರ ಸಭೆಯ ಕಟ್ಟಡದಲ್ಲಿರುವ ಕರ್ನಾಟಕ ಒನ್ ಕೇಂದ್ರಕ್ಕೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಸೋಮವಾರ ಭೇಟಿ ನೀಡಿ ಸರಕಾರದ ವಿವಿಧ ಯೋಜನೆಗಳ ಪ್ರಕ್ರಿಯೆಯನ್ನು ವೀಕ್ಷಿಸಿದರು. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯ ಬಗ್ಗೆ ಇದೇ ಸಂದರ್ಭದಲ್ಲಿ ಆರ್.ವಿ.ದೇಶಪಾಂಡೆಯವರು ಮಾಹಿತಿಯನ್ನು ಪಡೆದುಕೊಂಡರು. ಗೃಹಲಕ್ಷ್ಮಿ ಯೋಜನೆಗಳ ಅರ್ಜಿ ನೋಂದಣಿ ಸಂದರ್ಭದಲ್ಲಿ ತೊಡಕುಗಳು ಉಂಟಾದಲ್ಲಿ ಅಧಿಕಾರಿಗಳ ಗಮನಕ್ಕೆ ತರುವಂತೆ ಸಿಬ್ಬಂದಿಗಳಿಗೆ ಸೂಚನೆಯನ್ನು ನೀಡಿದರು.

    ಈ ಸಂದರ್ಭದಲ್ಲಿ ಕೇಂದ್ರದ ಬಳಿ ಸರದಿಯಲ್ಲಿ ನಿಂತ ಮಹಿಳೆಯರನ್ನು ಮಾತನಾಡಿಸಿದರು. ಇದೇ ಸಂದರ್ಭದಲ್ಲಿ ಚುನಾವಣೆಯ ಸಮಯದಲ್ಲಿ ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನ ಪಡಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ಸರಕಾರದ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕೆ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಆರ್.ಹೆಗಡೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಬಂದ0, ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಮುನ್ನಾ ವಹಾಬ್, ನಗರ ಸಭಾ ಸದಸ್ಯರುಗಳಾದ ಯಾಸ್ಮಿನ್ ಕಿತ್ತೂರು, ಸಂಜಯ್ ನಂದ್ಯಾಳ್ಕರ್, ಮೋಹನ ಹಲವಾಯಿ, ನಂದೀಶ್ ಮುಂಗರವಾಡಿ, ಮಹಾದೇವ ಜಮಾದಾರ್, ಪ್ರೀತಿ ನಾಯರ್, ರುಕ್ಮಿಣಿ ಬಾಗಾಡೆ, ಶಿಲ್ಪಾ ಖೋಡೆ, ಸಪೂರ ಯರಗಟ್ಟಿ, ಶಹಿದಾ ಪಠಾಣ್ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top