• Slide
    Slide
    Slide
    previous arrow
    next arrow
  • ಗೃಹಲಕ್ಮೀ ನೋಂದಣಿ ಕೇಂದ್ರಕ್ಕೆ ನಿವೇದಿತ್ ಆಳ್ವಾ ಭೇಟಿ: ಸಿಬ್ಬಂದಿಗಳೊಂದಿಗೆ ಚರ್ಚೆ

    300x250 AD

    ಹೊನ್ನಾವರ: ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿರುವ ಮತ್ತು ಹಳದೀಪುರದಲ್ಲಿರುವ ಗೃಹಲಕ್ಮೀ ನೊಂದಣಿ ಕೇಂದ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ, ಅಲ್ಲಿಯ ಸಿಬ್ಬಂದಿಗಳೊOದಿಗೆ ಕುಂದು- ಕೊರತೆಗಳ ಕುರಿತಂತೆ ವಿಚಾರ ವಿನಿಮಯ ನಡೆಸಿದರು.
    ಅದೇ ಸಂದರ್ಭದಲ್ಲಿ ಅಲ್ಲಿ ಅರ್ಜಿ ಸಲ್ಲಿಸಲು ಬಂದಿರುವ ಅರ್ಜಿದಾರರ ಸಮಸ್ಯೆಗಳನ್ನು ಆಲಿಸಿದರು. ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಮೀ ಯೋಜನೆಯ ಕುರಿತಂತೆ ಜನತೆಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಿ, ಆದಷ್ಟು ಶೀಘ್ರ ನೊಂದಣಿ ಮಾಡಿಸಿ ಯೋಜನೆಯ ಲಾಭ ಪಡೆದುಕೊಳಲು ಮುಂದಾಗಲು ಜನತೆಗೆ ತಿಳಿಹೇಳುವಂತೆ ಪ್ರಜಾಪ್ರತಿನಿಧಿಗಳಲ್ಲಿ ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಅವರೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಫಾರೂಕ್ ಶೇಖ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಕ್ರಿಯಾ ಶೇಖ್ ಮುಂತಾದವರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top