Slide
Slide
Slide
previous arrow
next arrow

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಕಂತು ಪಾವತಿಸುವ ಅವಧಿ ವಿಸ್ತಾರ

300x250 AD

ಶಿರಸಿ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ (RWBCIS) ಅಡಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ. ಈ ಸಂಬಂಧ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸುವ ದಿನಾಂಕವನ್ನು ರೈತರ ಹಿತ ದೃಷ್ಟಿಯಿಂದ, ನೊಂದಣಿ ಅವಧಿಯನ್ನು ಆ.07ರವರೆಗೆ ವಿಸ್ತರಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ತೋಟಗಾರಿಕಾ ಇಲಾಖೆಯ ಕಛೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top