Slide
Slide
Slide
previous arrow
next arrow

ಮಿಷನ್ ಇಂದ್ರಧನುಷ್ 5.0 ಅಭಿಯಾನ ಯಶಸ್ವಿಗೊಳಿಸಲು ಡಿಸಿ ಕರೆ

300x250 AD

ಕಾರವಾರ: ಜಿಲ್ಲೆಯಲ್ಲಿ ಆಗಸ್ಟ್ 07ರಿಂದ 12ರವರೆಗೆ ಮಿಷನ್ ಇಂದ್ರಧನುಷ್ ಅಭಿಯಾನವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಲಸಿಕೆಯಿಂದ ವಂಚಿತರಾದ ಗರ್ಭಿಣಿ ಹಾಗೂ ಮಕ್ಕಳನ್ನು ಗುರುತಿಸಿ ಅವರಿಗೆ ಕಡ್ಡಾಯ ಲಸಿಕೆ ನೀಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ನಿರ್ದೇಶನ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಿಷನ್ ಇಂದ್ರಧನುಷ್ ಅಭಿಯಾನ 5.0 ಕಾರ್ಯಕ್ರಮದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದ ಬಗ್ಗೆ ಗ್ರಾಮ ಪಂಚಾಯತಿ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ನಗರಸಭೆ ಕಸದ ವಾಹನಗಳಲ್ಲಿ ಜಿಂಗಲ್ಸ್ ಹಾಕಿ, ಕರಪತ್ರ, ಗೋಡೆ ಬರಹ, ಆಡಿಯೋ, ವಿಡಿಯೋ ಪೋಸ್ಟರ್‌ಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನದ ಉದ್ದೇಶ ಶೇ ನೂರರಷ್ಟು ಯಶಸ್ವಿಗೊಳಿಸಲು ಎಲ್ಲಾ ಇಲಾಖೆ, ಸಂಘ- ಸಂಸ್ಥೆಗಳು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಅವರು ಸೂಚನೆ ನೀಡಿದರು. ಎನ್‌ಪಿಎಸ್‌ಪಿ ಯುನಿಟಿ ಬೆಳಗಾವಿಯ ಎಸ್‌ಎಂಓ ಡಾ.ಸಿದ್ದಲಿಂಗಯ್ಯ ಮಾತನಾಡಿ, ಕೇಂದ್ರ ಸರ್ಕಾರ ಮಿಷನ್ ಇಂದ್ರಧನುಷ್ ಅಭಿಯಾನವನ್ನು 2014ರ ಡಿಸೆಂಬರ್ 25ರಂದು ಆರಂಭಿಸಿತು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಒಣ ಕೆಮ್ಮು, ದಡಾರ, ಪೋಲಿಯೋ, ಡಿಫ್ತೀರಿಯಾ, ಹೆಪಟೆಟಿಸ್ ಬಿ, ಧನುರ್ವಾಯು ಮತ್ತು ಕ್ಷಯ ರೋಗದಿಂದ ಮಕ್ಕಳನ್ನು ರಕ್ಷಿಸುವುದು ಅಭಿಯಾನದ ಉದ್ದೇಶವಾಗಿದೆ. ಜಿಲ್ಲೆಯಲ್ಲಿ ರುಬೆಲ್ಲಾ ಮತ್ತು ದಡಾರ ನಿರ್ಮೂಲನೆ ಮಾಡಲು ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದೆ. ವಿವಿಧ ಇಲಾಖೆಗಳು ಕಾರ್ಯಕ್ರಮಕ್ಕೆ ಸಮನ್ವಯ ಸಾಧಿಸಿ ಯಶಸ್ವಿಗೊಳಿಸಬೇಕಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗರ್ಭಿಣಿ ಮತ್ತು 05 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಜೊತೆ ಹಂಚಿಕೊಳ್ಳುವುದು. ತಾಯಂದಿರ ಸಭೆಯಲ್ಲಿ ಅರಿವು ಮೂಡಿಸುವುದು, ಪಂಚಾಯತ್ ರಾಜ್ ಇಲಾಖೆಯಿಂದ ಕಸ ವಿಲೆವಾರಿ ವಾಹನಗಳಲ್ಲಿ ಜಿಂಗಲ್ಸ್ ಹಾಕಿ ಪ್ರಚಾರ, ಶಿಕ್ಷಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮಗಳ ಬಗ್ಗೆ ಜಿಲ್ಲೆಯಾದ್ಯಂತ ಅರಿವು ಮೂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ವಿಶೇಷವಾಗಿ ದಢಾರ, ರುಬೆಲ್ಲಾ ಲಸಿಕಾಕರಣ, ಪಿಸಿವಿ ಲಸಿಕಾಕರಣ ಮತ್ತು ಇತ್ತೀಚೆಗೆ 3ನೇ ಡೋಸ್‌ಆಗಿ ಸೇರ್ಪಡೆಗೊಂಡಿರುವ ಎಫ್‌ಐಪಿವಿ ಲಸಿಕಾಕರಣದ ಪ್ರಗತಿ ಹೆಚ್ಚಿಸುವ ಸಲುವಾಗಿ ನಗರದಲ್ಲಿ ಮೂರು ಸುತ್ತುಗಳಲ್ಲಿ ಅಭಿಯಾನದ ಮೂಲಕ ಲಸಿಕೆ ನೀಡಲಾಗುವುದು. ಆ.7 ರಿಂದ 12ರವರೆಗೆ ಮೊದಲ ಸುತ್ತಿನಲ್ಲಿ ಲಸಿಕೆ ನೀಡಲಾಗುವುದು. ನಂತರ ಸೆಪ್ಟೆಂಬರ್ 11ರಿಂದ 16ರವರೆಗೆ 2ನೇ ಸುತ್ತು, ಅಕ್ಟೋಬರ್ 9ರಿಂದ 14ರವರೆಗೆ ಮೂರನೇ ಸುತ್ತಿನಲ್ಲಿ ಲಸಿಕೆ ನೀಡಲಾಗುವುದು ಎಂದರು.
ಆಗಸ್ಟ್ 07ರಿಂದ 12ರವರೆಗೆ ನಡೆಯಲಿರುವ ಮಿಷನ್ ಇಂದ್ರಧನುಷ್ ಅಭಿಯಾನ ಕಾರ್ಯಕ್ರಮದ ಜಾಗೃತಿ ಕುರಿತಾದ ಪೋಸ್ಟರ್‌ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಕುಡ್ತಲಕರ, ಆರ್‌ಸಿಎಚ್‌ಒ ಡಾ.ಮಂಜುನಾಥ, ವಿವಿಧ ಇಲಾಖೆ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಇದ್ದರು.

300x250 AD
Share This
300x250 AD
300x250 AD
300x250 AD
Back to top