Slide
Slide
Slide
previous arrow
next arrow

ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಪಾದಚಾರಿ ಸಾವು

300x250 AD

ಹೊನ್ನಾವರ: ತಾಲೂಕಿನ ಕಾಸರಕೊಡ ಗ್ರಾಮ ಪಂಚಾಯತಿಯಲ್ಲಿ ವ್ಯಾಪ್ತಿಯಲ್ಲಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಕೆಳಗಿನೂರ ಸಾಲೆಬೈಲ್ ನಿವಾಸಿ ಚಂದ್ರು ಗಣಪತಿ ಆಚಾರಿ (55), ರಸ್ತೆ ದಾಟುತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ವಾಹನ ನಿಲ್ಲಿಸದೆ ಪರಾರಿಯಾಗಿದೆ.

ರಸ್ತೆಯಲ್ಲಿ ಬಿದ್ದಿದ ವ್ಯಕ್ತಿಯನ್ನು ಸಾರ್ವಜನಿಕರು ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಸಾಗಿಸಿದ್ದು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ, ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮಂಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top