ಯಲ್ಲಾಪುರ: ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ ತಾಲೂಕಿನ ಕಿರವತ್ತಿ, ಹುಣಶೆಟ್ಟಿಕೊಪ್ಪ, ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಆ.8 ರ ಮುಂಜಾನೆ 8.30 ರಿಂದ ಪ್ರಾರಂಭವಾಗಲಿರುವ ಗಿಡ ನೆಡುವ ಕಾರ್ಯಕ್ರಮದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಭಾಗವಹಿಸಲಿದ್ದಾರೆ ಎಂದು ತಾಲೂಕಾ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ತಾಲೂಕಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ಅರಣ್ಯವಾಸಿಗಳಿಂದ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನಕ್ಕೆ ಜುಲೈ 31ರಂದು ಚಾಲನೆ ನೀಡಲಾಗಿದ್ದು, ಮನೆ ಮನೆಯಲ್ಲಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಹೆಚ್ಚಿನ ಚಾಲನೆ ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.