• Slide
    Slide
    Slide
    previous arrow
    next arrow
  • ಮೊಬೈಲ್ ದೋಚಿದ್ದ ಅಂತರಜಿಲ್ಲಾ ಕಳ್ಳನ ಬಂಧನ

    300x250 AD

    ಯಲ್ಲಾಪುರ: ಅಪರಿಚಿನೊಬ್ಬ ನಡೆದು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಬಲವಂತವಾಗಿ ಮೊಬೈಲ್ ದೋಚಿದ್ದು, ಈ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ.4ರಂದು ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ, ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ಹೋಗಿದ್ದು, ಯಲ್ಲಾಪುರ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅರಫಾತ್ ಅಜೀಮಸಾಬ ಅತ್ತಾರ್ (29) ಎಂದು ಗುರುತಿಸಲಾಗಿದೆ. ಈತ ಅಂತರ್ ಜಿಲ್ಲಾ ಕಳ್ಳನಾಗಿದ್ದು, ಅಂಕೋಲಾ, ಹುಬ್ಬಳ್ಳಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಪೊಲೀಸ್ ವ್ಯಾಪ್ತಿಯಲ್ಲಿಯೂ ಕಳ್ಳತನ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top