ಕಾರವಾರ: ಸ್ವಾತಂತ್ರ‍್ಯ ದಿನಚಾರಣೆಯಂದು ನಿಷೇಧಿತ ಪ್ಲಾಸ್ಟಿಕ್ ಧ್ವಜಗಳನ್ನು ಬಳಸದಂತೆ ಕಟ್ಟನಿಟ್ಟಾಗಿ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಸರ್ಕಾರದ ಗೃಹ ಮಂತ್ರಾಲಯವು (ಸಾರ್ವಜನಿಕ ವಿಭಾಗ) 2021ರ ಆ.5ರಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002ರಡಿ ಎಲ್ಲಾ ಸರಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ.