• Slide
    Slide
    Slide
    previous arrow
    next arrow
  • ಬೋಳೆ ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಪೂರಕ ಸಾಮಾಗ್ರಿಗಳ ವಿತರಣೆ

    300x250 AD

    ಅಂಕೋಲಾ: ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯ ವಿದ್ಯಾರ್ಥಿಗಳಿಗೆ ವಂದಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಲತಾ ಆರ್.ನಾಯಕ ಐಡಿ ಕಾರ್ಡ್, ಟೈ, ನೋಟ್‌ಬುಕ್, ಬೆಲ್ಟ್, ಪೆನ್ನು ಇತರೆ ಕಲಿಕಾ ಪೂರಕ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.

    ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ತುಂಬ ಅಗತ್ಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಶಿಕ್ಷಣ ಕಡೆಗೆ ಹೆಚ್ಚಿನ ಗಮನವನ್ನು ಕೊಡಬೇಕು. ಈ ಶಾಲೆಯಲ್ಲಿ ಕಲಿಕಾ ಪೂರಕ ವಾತಾವರಣವಿದ್ದು, ಸುಂದರವಾದ ಶಾಲಾ ಪರಿಸರವನ್ನು ಹೊಂದಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ನಿಯಮಿತವಾಗಿ ಶಾಲೆಗೆ ಬರುವುದರ ಮೂಲಕ ಮಾಡಿಕೊಳ್ಳಬೇಕೆಂದರು. ಶಾಲಾ ಮುಖ್ಯಾಧ್ಯಾಪಕ ಜಗದೀಶ ಜಿ.ನಾಯಕ ಹೊಸ್ಕೇರಿ ಮಾತನಾಡಿ, ಪುಷ್ಪಲತಾ ನಾಯಕರವರು ಶಾಲಾ ವಿದ್ಯಾರ್ಥಿಗಳಿಗೆ ಕಳೆದ ಸಾಲಿನಿಂದ ಕಲಿಕಾ ಪೂರಕ ಸಾಮಾಗ್ರಿಗಳನ್ನು ಹಾಗೂ ಶಾಲೆಗೆ ಅಗತ್ಯ ಭೌತಿಕ ಸೌಲಭ್ಯಗಳನ್ನು ನೀಡುವತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಶಿಕ್ಷಣದ ಪರವಾದ ಅವರ ಕಾಳಜಿ ಮೆಚ್ಚುವಂತದ್ದು ಎಂದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಶ್ವೇತಾ ಪ್ರಶಾಂತ ಆಗೇರ ಕಲಿಕಾ ಸಾಮಾಗ್ರಿಯನ್ನು ಶಾಲಾ ವಿದ್ಯಾರ್ಥಿಗಳಿಗೆ ಒದಗಿಸಿಕೊಟ್ಟ ಬಗ್ಗೆ ಅಭಿನಂದನೆ ಸಲ್ಲಿಸಿದರು. ಶಾಲಾ ವಿದ್ಯಾರ್ಥಿನಿ ಸೌಂದರ್ಯ ನಾಯ್ಕ ವಂದಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top