• Slide
    Slide
    Slide
    previous arrow
    next arrow
  • ರೈಲ್ವೆ ಹಳಿ ಸಮೀಪ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

    300x250 AD

    ಭಟ್ಕಳ: ಬೆಳಕೆ ಪಿನ್ನುಪಾಲ ರೈಲ್ವೆ ಹಳಿ ಸಮೀಪ ವ್ಯಕ್ತಿಯೋರ್ವರ ಮೃತದೇಹ ಅನುಮಾನಾಸ್ಪದವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
    ಮೃತ ವ್ಯಕ್ತಿಯನ್ನು ಶೇಖರ ನಾಯ್ಕ ಎಂದು ಗುರುತಿಸಲಾಗಿದೆ. ಈತ ಆ.5ರ ರಾತ್ರಿ 11 ಗಂಟೆ ಸುಮಾರಿಗೆ ಪುರವರ್ಗ ದುರ್ಗಾ ಹೋಟೆಲ್‌ಗೆ ಕೆಲಸಕ್ಕೆ ಹೋದವನು ಊಟ ಹಾಗೂ ಮದ್ಯದ ಬಾಟಲಿ ತೆಗೆದುಕೊಂಡು ಹೋದವನು ಮನೆಗೂ ಹೋಗಿರಲಿಲ್ಲ. ಆದರೆ ಪಿನ್ನುಪಾಲ ರೈಲ್ವೆ ಹಳಿ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
    ಈತನ ಸಾವಿನ ಬಗ್ಗೆ ಸಂಶಯವಿರುವ ಕಾರಣ ಗ್ರಾಮೀಣ ಠಾಣೆಯಲ್ಲಿ ಮೃತನ ಸಂಬOಧಿ ವೆಂಕಟೇಶ ನಾಯ್ಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಠಾಣೆಯ ಸಿಪಿಐ ಚಂದನ್ ಗೋಪಾಲ ಶವವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಮೃತನ ಸಾವಿನ ನಿಖರ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top