• Slide
    Slide
    Slide
    previous arrow
    next arrow
  • ನೂತನ ರಾಷ್ಟ್ರೀಯ ಶಿಕ್ಷಣ ನೀತಿ; ಪದವಿಯಲ್ಲಿ 2 ವರ್ಷ ಕಡ್ಡಾಯ ಕನ್ನಡ ಅಧ್ಯಯನ

    300x250 AD

    ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪದವಿ ಕೋರ್ಸ್‍ನ ಮೊದಲೆರಡು ವರ್ಷಗಳಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆ ಅಧ್ಯಯನ ಮಾಡಲಿದ್ದಾರೆ ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

    ಪದವಿಯ ಮೊದಲ ಎರಡು ವರ್ಷಗಳ ವಿದ್ಯಾರ್ಥಿಗಳು ಎರಡು ಭಾಷಾ ವಿಷಯಗಳನ್ನು ಕಲಿಯಲಿದ್ದು, ಅದರಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿರುತ್ತದೆ. ಕನ್ನಡ ಭಾಷೆಯ ಬಗ್ಗೆ ತಿಳಿಯದವರಿಗೂ ಪ್ರಾಯೋಗಿಕವಾಗಿ ಕನ್ನಡ ಭಾಷೆಯನ್ನು ಹೇಳಿಕೊಡುವ ಕೆಲಸವನ್ನು ಮಾಡಲಾಗುತ್ತದೆ. ಇದರಲ್ಲಿ ಹೊರ ರಾಜ್ಯ. ಮತ್ತು ವಿದೇಶೀ ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.

    300x250 AD

    ಪದವಿಯ ನಾಲ್ಕು ಸೆಮಿಸ್ಟರ್‍ಗಳಲ್ಲಿ ಕನ್ನಡ ಭಾಷೆಯ ಅಧ್ಯಯನ ಇರುತ್ತದೆ. ಇಲ್ಲಿ ವಿದ್ಯಾರ್ಥಿಗಳು ಕನ್ನಡ ಮಾತನಾಡುವ, ಸಂವಹನ ನಡೆಸುವ, ಮೂಲ ಭಾಷೆಯ ಪರಿಚಯ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು. ಪ್ರಾಯೋಗಿಕವಾಗಿ ಮೊದಲಿಗೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಮೊದಲನೆ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಶಿಕ್ಷಣ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

    ಎನ್‍ಇಪಿಗೆ ಪೂರಕವಾಗಿ ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ಪಠ್ಯಕ್ರಮ ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವಾಲಯವು ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top