Slide
Slide
Slide
previous arrow
next arrow

ತಾಲೂಕು ಮಟ್ಟದ ಚೆಸ್ ಸ್ಪರ್ಧೆ: ವಿದ್ಯಾರ್ಥಿನಿ ಶಿಫಾ ಖಾನ್ ಪ್ರಥಮ

300x250 AD

ದಾಂಡೇಲಿ: ಹಳಿಯಾಳ ತಾಲ್ಲೂಕಿನ ತೇರಗಾಂವ್‌ನಲ್ಲಿ ನಡೆದ 14 ವರ್ಷದ ಒಳಗಿನ ಬಾಲಕಿಯರ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ನಗರದ ಸೇಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಶಿಫಾ ರಫೀಕ್ ಖಾನ್ ಈಕೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಈಗಾಗಲೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ನಗರದ ಉದ್ಯಮಿ ಹಾಗೂ ಅಂಬೇವಾಡಿಯ ನಿವಾಸಿ ರಫೀಕ್ ಖಾನ್ ಮತ್ತು ಶಗುಪ್ತಾ ದಂಪತಿಗಳ ಸುಪುತ್ರಿಯಾಗಿದ್ದಾಳೆ. ಈಕೆಯ ಸಾಧನೆಗೆ ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕ ವೃಂದ ಹಾಗೂ ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top