• Slide
  Slide
  Slide
  previous arrow
  next arrow
 • ಮುಂಗಾರು ಅಧಿವೇಶನ: ಲೋಕಸಭೆಯಲ್ಲಿ 22, ರಾಜ್ಯಸಭೆಯಲ್ಲಿ 25 ಮಸೂದೆ ಅಂಗೀಕಾರ

  300x250 AD

  ನವದೆಹಲಿ: ಶುಕ್ರವಾರ ಮುಕ್ತಾಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆಯು 45 ಪ್ರತಿಶತ ಮತ್ತು ರಾಜ್ಯಸಭೆಯು 63 ಪ್ರತಿಶತ ಉತ್ಪಾದಕತೆಯನ್ನು ದಾಖಲಿಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಅಧಿವೇಶನದಲ್ಲಿ ಲೋಕಸಭೆಯಲ್ಲಿ 22 ಮತ್ತು ರಾಜ್ಯಸಭೆಯಲ್ಲಿ 25 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಅವುಗಳು ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ 2023, ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2023, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ 2023, ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ 2023, ಅನುಸಂಧಾನ್ ನ್ಯಾಷನಲ್ ರಿಸರ್ಚ್ 2023 ಮತ್ತು ಜೈವಿಕ ವೈವಿಧ್ಯ (ತಿದ್ದುಪಡಿ) ಮಸೂದೆ, 2023‌ ಸೇರಿವೆ ಎಂದಿದ್ದಾರೆ.

  ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಧೋರಣೆಯನ್ನು ಜೋಶಿ ಪ್ರಶ್ನಿಸಿದರು. ಮಣಿಪುರ ಹಿಂಸಾಚಾರದ ವಿಚಾರವನ್ನು ಮೊದಲ ದಿನದಿಂದ ಚರ್ಚಿಸಲು ಸರ್ಕಾರ ಸಿದ್ಧವಾಗಿತ್ತು ಮತ್ತು ಉಭಯ ಸದನಗಳಲ್ಲಿ ಚರ್ಚೆಗೆ ಲಿಖಿತ ಒಪ್ಪಿಗೆ ನೀಡಿತ್ತು ಎಂದು ಜೋಶಿ ಹೇಳಿದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top