ಶಿರಸಿ: ಶಿರಸಿ ತಾಲೂಕಿನ ಆಟೋರಿಕ್ಷಾ ಹಾಗೂ ಗೂಡ್ಸ್ ರಿಕ್ಷಾ ಚಾಲಕ-ಮಾಲಕರಿಗೆ ಸಮವಸ್ತ್ರದ ಉಚಿತ ವಿತರಣೆ, ಔತಣಕೂಟ, ಆಟೋ ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ವಿತರಣಾ ಸಮಾರಂಭ ಆ.13ರಂದು ನಗರದ ಯಲ್ಲಾಪುರ ರಸ್ತೆಯ ಅಂಬೇಡ್ಕರ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ತಿಳಿಸಿದರು.
ನಗರದ ಸುಪ್ರಿಯಾ ಹೊಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಳೆ, ಬಿಸಿಲು, ಹಗಲು-ರಾತ್ರಿಯನ್ನದೇ ಎಲ್ಲರನ್ನೂ ಸುರಕ್ಷಿತವಾಗಿ ಕರೆದೊಯ್ಯುವ ಆಟೋ ರಿಕ್ಷಾ ಚಾಲಕರು ಪರಿಸ್ಥಿತಿ ಕಷ್ಟದಲ್ಲಿದೆ. ಅವರ ಕಷ್ಟಕ್ಕೆ ಸ್ಪಂದಿಸಬೇಕೆಂಬ ಉದ್ದೇಶದಿಂದ ಅನಂತಮೂರ್ತಿ ಹೆಗಡೆ ಚ್ಯಾರಿಟೆಬಲ್ ಟ್ರಸ್ಟ್ ನಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಿಕ್ಷಾ ಚಾಲಕ ಮಾಲಕರ ಅನುಕೂಲತೆ ದೃಷ್ಟಿಯಿಂದ 30 ದಿನಗಳ ಕಾಲ ಪ್ಯಾಸೆಂಜರ್ ರಿಕ್ಷಾ ಪಾಸಿಂಗ್ ಯೋಜನೆ ಪ್ರಾರಂಭಿಸಲಾಗಿದೆ. ಭವಿಷ್ಯದಲ್ಲಿ ಕಷ್ಟದಲ್ಲಿರುವವರಿಗೆ ಉಚಿತ ಇನ್ಸೂರೆನ್ಸ್, ಮಕ್ಕಳ ಉನ್ನತ ಶಿಕ್ಷಣ ತರಬೇತಿ ಮತ್ತು ಧನಸಹಾಯ, ವೈದ್ಯಕೀಯ ಸಹಾಯ ಹಲವಾರು ಯೋಜನೆ ಅನುಷ್ಠಾನಗೊಳಿಸುವ ಆಸೆ ಇದೆ ಎಂದರು.
ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ವೈ.ಎನ್.ಪಡಸಾಲಿ ಉದ್ಘಾಟಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಿರಸಿ ಆಟೋ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಉಪೇಂದ್ರ ಪೈ, ಉತ್ತರಕನ್ನಡ ಮತ್ತು ಹೊನ್ನಾವರ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ, ಸಿ.ಪಿ.ಐ ರಾಮಚಂದ್ರ ನಾಯಕ, ಸ್ಕೋಡ್ ವೆಸ್ ಕಾರ್ನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ, ಅಂತಾರಾಷ್ಟ್ರೀಯ ಮಾನವ ಹಕ್ಕು ಆಯೋಗದ ಜಿಲ್ಲಾಧ್ಯಕ್ಷ ಮಂಜುನಾಥ ಮೊಗೇರ, ನರೆಬೈಲ್ ಗ್ರೂಪ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಹೆಗಡೆ ಅತಿಥಿಗಳಾಗಿ ಉಪಸ್ಥಿತರಿಲಿದ್ದಾರೆ ಎಂದರು.
ಸನ್ಮಾನ :
ಆ.15 ರಂದು ಸಂಜೆ 4ಘಂಟೆಗೆ ಅಂಬೇಡ್ಕರ್ ಸಭಾಭವನದಲ್ಲಿ ಸ್ವಾತಂತ್ರ್ಯ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತಾ ಗೌರವ ಹಾಗೂ ನಿವೃತ್ತ ಯೋಧರನ್ನು ಸನ್ಮಾನಿಸಲಾಗುವುದು ಎಂದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕಾಶಿನಾಥ ಮೂಡಿ ಉದ್ಘಾಟಿಸಲಿದ್ದು, ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ತಹಸೀಲ್ದಾರ್ ಶ್ರೀಧರ ಮುಂದಲಮನಿ, ಚಿಂತಕ ಶಿವಾನಂದ ಹೆಗಡೆ ಕಳವೆ, ಡಿ.ಎಫ್.ಓ ಡಾ.ಅಜ್ಜಯ್ಯ, ಡಿ.ಎಸ್.ಪಿ ಗಣೇಶ.ಕೆ.ಎಲ್, ಎಂ.ಇ.ಎಸ್ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಸ್ಕೊಡ್ ವೆಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ ನಾಯ್ಕ, ಮನುವಿಕಾಸ ಸಂಸ್ಥೆಯ ವ್ಯವಸ್ಥಾಪಕ ಗಣಪತಿ ಭಟ್ಟ, ಪರಮಾನಂದ ಹೆಗಡೆ ಪಾಲ್ಗೊಳ್ಳಲಿದ್ದಾರೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವಿ.ಎಂ.ಭಟ್ಟ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಸಂಚಾಲಕ ಸಂತೋಷ ನಾಯ್ಕ ಬ್ಯಾಗದ್ದೆ, ಮೇಲ್ವಿಚಾರಕ ಅಹೀಶ ಹೆಗಡೆ ಉಲ್ಲಾಳ, ಪರಮಾನಂದ ಹೆಗಡೆ ಇದ್ದರು.