ಹಳಿಯಾಳ: ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಪಿಎಸ್ಐ ವಿನೋದ್ ರೆಡ್ಡಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗ, ಇಂಗ್ಲಿಷ್ ವಿಭಾಗ ಸಾಂಸ್ಕೃತಿಕ ಹಾಗೂ ಪ್ಲೇಸ್ಮೆಂಟ್ ಸೆಲ್ ಸಹಯೋಗದೊಂದಿಗೆ ಗ್ರಂಥಾಲಯ ಪಿತಾಮಹ ಡಾ. ಎಸ್ ಆರ್ ರಂಗನಾಥ್ 131 ನೇ ಜನ್ಮದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ‍್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚೆಗೆ ಅಂತರ್ಜಾಲದ ದುರುಪಯೋಗ ಹೆಚ್ಚಾಗುತ್ತಿದೆ. ಜನರು ಒಂದು ಸಣ್ಣ ತಪ್ಪಿನಿಂದಾಗಿ ಹಣ ಹಾಗೂ ಮಹತ್ವದ ಮಾಹಿತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಮೂಲಕ ತಿಳಿದೋ ಅಥವಾ ತಿಳಿಯದೆಯೋ ವಿವಿಧ ಸಂಕಷ್ಟಗಳಿಗೆ ಸಿಲುಕಿ ನಲುಗುತ್ತಿದ್ದಾರೆ ಎಂದರು.
ಸೈಬರ್ ಕ್ರೈಂ ತಡೆಯುವ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯಗತ್ಯ. ವಿವಿಧ ಸಂಸ್ಥೆಗಳಲ್ಲೂ ಪ್ರತಿ ಕೆಲಸದಲ್ಲಿಯೂ ಕಂಪ್ಯೂಟರ್, ವಾಟ್ಸಪ್, ಪೇಸ್ಬುಕ್ ಹೀಗೆ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತೇವೆ. ಆದ್ದರಿಂದ ಈ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಜಾಗೃತರಾಗಬೇಕು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯುಪಿಎಸ್ ಸಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳನ್ನು ಯಾವ ರೀತಿ ತೆಗೆದುಕೊಳ್ಳಬೇಕು ಹಾಗೂ ಸಿದ್ದತೆ ಮಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಆರ್. ರಾಮಾ ನಾಯ್ಕ ಮಾಹಿತಿ ನೀಡಿದರು.
ಕಾರ‍್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ ಚಂದ್ರಶೇಖರ ಲಮಾಣಿ, ಉಪನ್ಯಾಸಕರಾದ ಡಾ. ಮಂಜುನಾಥ್ ಲಮಾಣಿ, ಡಾ. ಜಗುಬಾಯ್,
ಡಾ.ಸಂಗೀತಾ ಕಟ್ಟಿಮನಿ, ಡಾ. ಪರಮಾನಂದ ದಾಸರ, ಡಾ. ಪ್ರಸಾದ ಕುಲರ‍್ಣಿ, ಡಾ. ರಾಮಾ ಗೌಡ, ದಾನೇಶ್ವರಿ ಗುಡ್ಡದ್, ರಂಜಿತಾ ಎಸ್ ಅಂಬಿಪ್ಪಿ, ಹಾಗೂ ಡಾ. ಧನರಾಜ್ ಕೆಂದೂರ್ ಸೇರಿ ಹಲವರು ಉಪಸ್ಥಿತರಿದ್ದರು