• Slide
    Slide
    Slide
    previous arrow
    next arrow
  • ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ ಸ್ಟೇಡಿಯಂಗೆ ನೀರಜ್ ಚೋಪ್ರಾ ಹೆಸರು ಮರುನಾಮಕರಣ

    300x250 AD

    ನವದೆಹಲಿ: ಮಹಾರಾಷ್ಟ್ರದ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ ಸ್ಟೇಡಿಯಂಗೆ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದ ನೀರಜ್ ಚೋಪ್ರಾ ಅವರ ಹೆಸರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮರುನಾಮಕರಣ ಮಾಡಿದ್ದಾರೆ.

    ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜ. ಎಂ. ಎಂ. ನರವಾಣೆ ಮತ್ತು ನೀರಜ್ ಚೋಪ್ರಾ ಉಪಸ್ಥಿತರಿದ್ದರು. ಜಪಾನಿನ ಟೊಕಿಯೋದಲ್ಲಿ ನಡೆದ ಒಲಿಂಪಿಕ್ಸ್ 2020 ರಲ್ಲಿ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗಳಿಸಿದ್ದರು. ಅವರ ಈ ಸಾಧನೆಗೆ ಗೌರವ ಸಲ್ಲಿಸುವ ಸಲುವಾಗಿ ಈ ಸ್ಟೇಡಿಯಂಗೆ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.

    300x250 AD

    ಒಲಿಂಪಿಕ್ಸ್‌ನಲ್ಲಿ ಚೋಪ್ರಾ ಅವರ ಅದ್ಭುತ ಪ್ರದರ್ಶನದ ಕಾರಣಕ್ಕೆ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅವರ ಮುಂದಿನ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ರಾಜನಾಥ್ ಸಿಂಗ್ ಅವರು ಇದೇ ಸಂದರ್ಭದಲ್ಲಿ ಹಾರೈಸಿದರು. ಹಾಗೆಯೇ ಇದೇ ಸಂದರ್ಭದಲ್ಲಿ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದವರನ್ನು ಗೌರವಿಸಲಾಯಿತು.
    ನ್ಯೂಸ್ 13

    Share This
    300x250 AD
    300x250 AD
    300x250 AD
    Leaderboard Ad
    Back to top