Slide
Slide
Slide
previous arrow
next arrow

ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

300x250 AD

ಶಿರಸಿ: ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸುವ ಸ್ವಾತಂತ್ರ್ಯೋತ್ಸವವನ್ನು ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉತ್ಸಾಹದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ನಡೆಸಿಕೊಟ್ಟ ಮಿರ್ಯಾಡ್ಸ ಸಂಸ್ಥೆಯ ಕಾರ್ಯದರ್ಶಿಯಾದ ಎಲ್.ಎಮ್. ಹೆಗಡೆ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಷಯ ತಿಳಿಸಿ,ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಮಕ್ಕಳನ್ನು ಉದ್ದೇಶಿಸಿ ಹಾರೈಸಿದರು. ಮುಖ್ಯೋಪಾಧ್ಯಾಯರಾದ ಸಿಂಧೂರ್ ಭಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಚಂದನ ಆಂಗ್ಲ ಮಾಧ್ಯಮ ಶಾಲೆಯ ಸೇವಾದಳ ವಿದ್ಯಾರ್ಥಿಗಳು ದೇಶ ಭಕ್ತಿಗೀತೆಯನ್ನು ಡೆಂಬೆಲ್ಸ್, ಹೂಪ್ಸ್ ,ನೃತ್ಯದ ಮೂಲಕ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಚಂದನ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿಗಳು, ಪಾಲಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top