Slide
Slide
Slide
previous arrow
next arrow

ಶೀಘ್ರವೇ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಚಿವ ವೈದ್ಯ

300x250 AD

ಕಾರವಾರ: ಈಗಾಗಲೇ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅನೇಕ ಸೌಲಭ್ಯಗಳು ಇದ್ದು, ಅದರೊಂದಿಗೆ ಹೆಚ್ಚಿನ ಸೌಲಭ್ಯಗಳನ್ನು ಅಳವಡಿಸಿ ಶೀಘ್ರದಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭರವಸೆ ನೀಡಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಬಳಿಕ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಹೊನ್ನಾವರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಆಸೆ ನನಗೂ ಇದೆ. ಜತೆಗೆ ಕುಮಟಾದಲ್ಲಿಯೂ ಜಾಗ ನೋಡಲಾಗಿದೆ. ಈ ಎರಡು ಕಡೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದರು.

ಧ್ವಜಾರೋಹಣದ ಬಳಿಕ ಸಚಿವರು ಪರೇಡ್ ಪರಿವೀಕ್ಷಣೆ ನಡೆಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರೀಕ ಪೊಲೀಸ್ ತುಕಡಿ, ಮಹಿಳಾ ಪೊಲೀಸ್ ಪಡೆ, ಅರಣ್ಯ ಇಲಾಖೆ, ಗೃಹ ರಕ್ಷಕ ದಳ, ಸೇಂಟ್ ಮೈಕಲ್, ಸೇಂಟ್ ಜೋಸೆಫ್, ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಬಾಪೂಜಿ ಕಾಲೇಜು, ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎನ್‌ಸಿಸಿ ಬೆಟಾಲಿಯನ್‌ಗಳು, ಸೇವಾದಾಳ ಹಾಗೂ ಸ್ಕೌಟ್ ಮತ್ತು ಗೈಡ್ಸ್ ವಿಭಾಗದ ತಂಡಗಳು ಆಕರ್ಷಕ ಕವಾಯತು ನಡೆಸಿದವು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

300x250 AD

ಕಾರವಾರ ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಖಂಡೂ, ಡಿಎಫ್‌ಒ ಪ್ರಶಾಂತ ಕೆ.ಸಿ, ಎಎಸ್‌ಪಿ ಜಯಕುಮಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

Share This
300x250 AD
300x250 AD
300x250 AD
Back to top