ಹೊನ್ನಾವರ: ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕರ್ಕಿಯ ಶ್ರೀಚನ್ನಕೇಶವ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು. ಜಿಲ್ಲಾ ಜನಜಾಗ್ರತಿ ವೇದಿಕೆ ಸದಸ್ಯ ಶಿವರಾಜ ಮೇಸ್ತ ದೀಪ ಬೆಳಗುವ ಮುಲಕ ಕಾರ್ಯಕ್ರಮ ಉದ್ಘಾಟಿಸಿ ವೇದಿಕೆ ವತಿಯಿಂದ ಕೈಗೊಳ್ಳಲಾದ ಜನಜಾಗ್ರತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ದುಶ್ಚಟ ದುರಭ್ಯಾಸದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ವೈದ್ಯರಾದ ಡಾ.ಚೈತ್ರರವರು ಹದಿಹರೆಯದ ವಯಸ್ಸಿನಲ್ಲಿ ಮೂಡುವ ಆಲೋಚನೆಗಳು ಹಾಗೂ ಅವುಗಳನ್ನು ಎದುರಿಸುವ ಮಾರ್ಗಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕ ನಾಗರಾಜ್ ಪ್ರಾಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮ ಉದ್ದೇಶ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯೆ ವಿಜಯಲಕ್ಷ್ಮಿ ಭಟ್ ಹಾಗೂ ಒಕ್ಕೂಟ ಉಪಾಧ್ಯಕ್ಷರಾದ ರೂಪಾ ನಾಯ್ಕ, ಮುಖ್ಯ ಶಿಕ್ಷಕರಾದ ಶ್ರೀಕಾಂತ್ ಹಿತ್ನಲ್ಲಿ ಉಪಸ್ಥಿತರಿದ್ದರು.