• Slide
    Slide
    Slide
    previous arrow
    next arrow
  • ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ: ಓರ್ವನ ಬಂಧನ

    300x250 AD

    ದಾಂಡೇಲಿ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಯುವಕನೋರ್ವ ಹಲ್ಲೆ ಮಾಡಿದ ಘಟನೆ ನಗರದ ಲಿಂಕ್ ರಸ್ತೆಯಲ್ಲಿ ನಡೆದಿದೆ.
    ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳ ಬಳಗದ ಆಶ್ರಯದಲ್ಲಿ ಸಂಗೊಳ್ಳಿ ರಾಯಣ್ಣ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆ ನಗರದ ಕೆ.ಸಿ.ವೃತ್ತದಿಂದ ಲಿಂಕ್ ರಸ್ತೆಗೆ ಬರುತ್ತಿದ್ದಂತೆಯೆ ಲಿಂಕ್ ರಸ್ತೆಯಲ್ಲಿ ಮೆರವಣಿಗೆಗೆ ಭದ್ರತೆಯನ್ನು ಒದಗಿಸುತ್ತಿದ್ದ ಪೊಲೀಸ್ ಸಿಬ್ಬಂದಿ ದ್ಯಾವಪ್ಪ ಹೊಸಮನಿ ಎಂಬವರ ಮೇಲೆ ಯುವಕನೋರ್ವ ಏಕಾಏಕಿ ಕೈಯಲ್ಲಿ ಧರಿಸಿದ್ದ ಖಡ್ಗದಿಂದ ಹಲ್ಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ದ್ಯಾವಪ್ಪ ಹೊಸಮನಿಯವರ ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ಕೂಡಲೆ ಗಾಯಗೊಂಡಿರುವ ದೇವಪ್ಪ ಹೊಸಮನಿಯವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿದ್ದು, ತಲೆಗೆ ಗಾಯವಾಗಿರುವ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ.

    ಈ ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಹಲ್ಲೆ ಮಾಡಿದ ಯುವಕನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಹಲ್ಲೆ ಮಾಡಿದ ಯುವಕ ಸ್ಥಳೀಯ ಸಾಯಿನಗರದ ನಿವಾಸಿ ಅಭಿಷೇಕ್ ಎಂದು ತಿಳಿದು ಬಂದಿದ್ದು, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗೆ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಭೀಮಣ್ಣ.ಎಂ.ಸೂರಿ, ಪಿಎಸೈಗಳಾದ ಐ.ಆರ್.ಗಡ್ಡೇಕರ್, ಯಲ್ಲಪ್ಪ.ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಕರ್ತವ್ಯನಿರತ ಪೊಲೀಸಪ್ಪನ ಮೇಲೆ ನಗರದಲ್ಲಿ ಇದೇ ಮೊದಲ ಬಾರಿಗೆ ಹಲ್ಲೆಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮವನ್ನು ಕೈಗೊಳ್ಳಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top