ಶಿರಸಿ: ಕರಾವಳಿ, ಮಲೆನಾಡು ಹಾಗೂ ಇತರೇ ಅವಶ್ಯ ಇರುವ ಕಡೆಗಳಲ್ಲಿ ಸಂಪರ್ಕ ರಹಿತ ಹಳ್ಳಿಗಳಿಗೆ ಕಾಲುಸಂಕ ನಿರ್ಮಾಣ ಮಾಡಲು ಸೂಕ್ತ ಪ್ರಸ್ತಾವನೆಗಳನ್ನು ತಯಾರಿಸಲು ನಿರ್ಧರಿಸಲಾಗಿದೆ ಎಂದು ಲೋಕಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು.
ಅರಣ್ಯ ಭೂಮಿ ಹಕ್ಕು ಹೋರಾಟಗಾರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ್ಕ ನೇತೃತ್ವದಲ್ಲಿ, ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಸಂಪರ್ಕ ಕೊರತೆಯಾದ ಕಾಲುಸಂಕಕ್ಕೆ ಹೆಚ್ಚಿನ ಅನುದಾನವನ್ನ ಬಿಡಗಡೆಗೊಳಿಸಬೇಕೆಂದು ಆಗ್ರಹಿಸಿ ಮನವಿ ನೀಡಿದ ಹಿನ್ನೆಲೆಯಲ್ಲಿ ಮೇಲಿನಂತೆ ಹೇಳಿದರು. ಈಗಾಗಲೇ ಸರಕಾರ ಪ್ರಧಾನ ಕಾರ್ಯದರ್ಶಿ ಲೋಕಪಯೋಗಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕಾಲುಸಂಕಕ್ಕೆ ಸಂಬ0ಧಿಸಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಅವರು ತಿಳಿಸಿದರು.
ಗುಡ್ಡಗಾಡು ಜನರು ಸಂಪರ್ಕದ ಕೊರತೆಯಿಂದ ಮೂಲಭೂತ ಸೌಕರ್ಯದಿಂದ ವಂಚಿತರಾಗುತ್ತಿರುವುದು ಖೇದಕರ. ಕಾಲುಸಂಕ ಕೊರತೆಯಿಂದ ಗ್ರಾಮೀಣ ಭಾಗದ ಗುಡ್ಡಗಾಡು ಜನರು ಹಾಗೂ ವಿದ್ಯಾರ್ಥೀಗಳು ದಿನನಿತ್ಯ ಸಂಚಾರದ ಸಮಸ್ಯೆಗಳನ್ನ ಏದುರಿಸುತ್ತಿರುವರು. ಮಳೆಗಾಲದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರಿಂದಲೇ ರಚಿಸಿಕೊಂಡ ತಾತ್ಕಾಲಿಕ ಕಾಲುಸಂಕದ ಮೇಲಿನ ಓಡಾಟ ಅಪಾಯದಿಂದ ಕೂಡಿರುವುದರಿಂದ, ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರ ಬಂದಿರುವ0ತಹ ಹಿನ್ನೆಲೆಯಲ್ಲಿ ಸರಕಾರವು 500 ಕಾಲುಸಂಕಕ್ಕೆ ಮಂಜೂರಿಗೆ ಘೋಷಿಸಿ ಗುಡ್ಡಗಾಡು ಜಿಲ್ಲೆಯಾದ ಉತ್ತರ ಕನ್ನಡಕ್ಕೆ ವಿಶೇಷ ಕೊಡುಗೆ ನೀಡಬೇಕೆಂದು ಮನವಿಯಲ್ಲಿ ಪ್ರಸ್ತಾಪಿಸಲಾಗಿತ್ತು.
ರವೀಂದ್ರ ನಾಯ್ಕ ಅವರ ನೇತೃತ್ವದ ನಿಯೋಗದಲ್ಲಿ ಹಿರಿಯ ಹೋರಾಟಗಾರರಾದ ಜಿ ಎಮ್ ಶೆಟ್ಟಿ ಅಂಕೋಲಾ, ಬಾಲಚಂದ್ರ ಶೆಟ್ಟಿ ಅಚಿವೆ, ಮಾಭ್ಲೇಶ್ವರ ನಾಯ್ಕ ಬೇಡ್ಕಣಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಸುನೀಲ್ ನಾಯ್ಕ ಸಂಪಖ0ಡ, ಯಲ್ಲಾಪುರ ಅಧ್ಯಕ್ಷ ಭಿಮ್ಸಿ ವಾಲ್ಮೀಕಿ, ನಾಗರಾಜ ಮರಾಠಿ, ದಿನೇಶ್ ನಾಯ್ಕ ಬೇಡ್ಕಣಿ ಮುಂತಾದವರು ನಿಯೋಗದಲ್ಲಿ ಉಪಸ್ಥಿತರಿದ್ದರು.
ವಿಶೇಷ ಅನುದಾನ:
ಗುಡ್ಡಗಾಡು ಪ್ರದೇಶವಾದ ಮಲೆನಾಡು ಮತ್ತು ಕರಾವಳಿ ಪ್ರದೇಶಕ್ಕೆ ಒಳಗೊಂಡ ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊರತೆಯಾಗಿರುವ ಕಾಲುಸಂಕಕ್ಕೆ ವಿಶೇಷ ಅನುದಾನವನ್ನ ಕೊಡಲು ಆಸಕ್ತನಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ನಿಯೋಗಕ್ಕೆ ಹೇಳಿದರು.