ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವತಿಯಿಂದ 2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ 2022ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2022 ರಿಂದ 31-12-2022) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆದು ಸೆ.05 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:Tel:+9108382201824 Tel:+919480886551 ನ್ನು ಸಂರ್ಪಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.