Slide
Slide
Slide
previous arrow
next arrow

ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರುಗಳಿಗೆ ನಿವೇದಿತ್ ಆಳ್ವಾ ಸನ್ಮಾನ

300x250 AD


ಹೊನ್ನಾವರ: ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಪಕ್ಷದ ಪ್ರಮುಖ ಮುಖಂಡರುಗಳ ಜೊತೆ ತೆರಳಿ ಶುಭ ಹಾರೈಸಿದರು.

ಹಳದೀಪುರ ಗ್ರಾಮ ಪಂಚಾಯತನ ಅಧ್ಯಕ್ಷೆ ಪುಷ್ಪಾ ನಾಯ್ಕ, ಮುಗ್ವಾ ಗ್ರಾಮ ಪಂಚಾಯತ್ ಅಧ್ಯಕ್ಷ ಈಶ್ವರ ನಾಯ್ಕ, ನವಿಲಗೋಣ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾದೇವಿ ನಾಯ್ಕ ಇವರ ಮನೆಗಳಿಗೆ ತೆರಳಿ ಸನ್ಮಾನಿಸಿ ಅಭಿನಂದಿಸಿದರು. ಹಳದೀಪುರ ಗ್ರಾಮ ಪಂಚಾಯತ ಅಧ್ಯಕ್ಷೆ ಪುಷ್ಪಾ ನಾಯ್ಕ ಅವರ ಮನೆಯಲ್ಲಿ ಉಪಸ್ಥಿತರಿದ್ದ ಕರ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿನೋದ ನಾಯ್ಕ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನಿವೇದಿತ್ ಆಳ್ವಾ ಅವರೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ, ಕೆಪಿಸಿಸಿ ಸದಸ್ಯ ಎಂ.ಎನ್.ಸುಬ್ರಮಣ್ಯ, ಡಿಸಿಸಿ ಕಾರ್ಯದರ್ಶಿ ರವಿ ಶೆಟ್ಟಿ, ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಆದ್ಯಕ್ಷ ಜಕ್ರಿಯ್ಯಾ ಶೇಖ್, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೃಷ್ಣ ಹರಿಜನ, ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷ ಕುಪ್ಪು ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಪಟಗಾರ ಮುಂತಾದವರಿದ್ದರು.

300x250 AD
Share This
300x250 AD
300x250 AD
300x250 AD
Back to top