ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್ ಅವರ ನೇತೃತ್ವದಲ್ಲಿ ಶನಿವಾರ ಭಾರತೀಯ ಜನತಾ ಪಕ್ಷದ ಬೂತ್ ಅಧ್ಯಕ್ಷರುಗಳ ಮನೆಗೆ ನಾಮಫಲಕ ಹಾಗೂ ಪಕ್ಷದ ಧ್ವಜ ಅಳವಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಯುವ ನಾಯಕ ವಿವೇಕ್ ಹೆಬ್ಬಾರ್ ಅವರು ಮಂಡಲಾಧ್ಯಕ್ಷರ ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಬೂತ್ ಅಧ್ಯಕ್ಷರುಗಳ ಮನೆಗೆ ನಾಮಫಲಕ ಹಾಗೂ ಪಕ್ಷದ ಧ್ವಜ ಅಳವಡಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಉಪಾಧ್ಯಕ್ಷ ಶಿರಿಷ್ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ, ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸೋಮೇಶ್ವರ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಕೈಟಕರ್, ಗ್ರಾಮ ಪಂಚಾಯತ ಅಧ್ಯಕ್ಷ ಮಹೇಶ ಕೇಸರಕರ್ ಪ್ರಮುಖರಾದ ಸಂಜೀವ ಮರಾಠಿ, ಭಾಸ್ಕರ ಮರಾಠಿ, ಸುರೇಶ್ ಮುಂಡಗೇಕರ್ ಹಾಗೂ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.