• Slide
    Slide
    Slide
    previous arrow
    next arrow
  • ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರಕಾರ ಬದ್ಧ: ಈಶ್ವರ ಖಂಡ್ರೆ

    300x250 AD

    ಶಿರಸಿ: ಕಸ್ತೂರಿ ರಂಗನ್ ಜಾರಿಯಿಂದ ಜನಸಾಮಾನ್ಯರಿಗೆ ಆಗುವ ಸಮಸ್ಯೆಗಳ ಕುರಿತು ಸರಕಾರಕ್ಕೆ ಸಂಪೂರ್ಣ ಮಾಹಿತಿ ಇದ್ದು, ಸಂಪೂರ್ಣವಾಗಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರಕಾರ ಬದ್ಧವಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಸರಕಾರದ ನಿಲುವನ್ನು ಪ್ರಕಟಿಸಿದ್ದಾರೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದ ನಿಯೋಗವು ವಿಧಾನಸೌಧದ ಅರಣ್ಯ ಸಚಿವರ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮೇಲಿನಂತೆ ಹೇಳಿದರು.

    ಈಗಾಗಲೇ ಸರಕಾರ ಕಸ್ತೂರಿ ರಂಗನ್ ತಿರಸ್ಕರಿಸುವ ಕುರಿತು ಸರಕಾರ ಮಟ್ಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ತಿರಸ್ಕರಿಸುವ ಕುರಿತು ಕ್ರಮ ತೆಗೆದುಕೊಳ್ಳಲಾಗುವುದೆಂದು ಅವರು ತಿಳಿಸಿದರು.

    ಕಸ್ತೂರಿರಂಗನ್ ಮತ್ತು ಅಭಯಾರಣ್ಯ ಪ್ರದೇಶದಲ್ಲಿ ಗುರುತಿಸಲಾದ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ, ರಸ್ತೆ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಬಂಧಿಸಿದ ಕೈಗಾರಿಕೆಗಳಿಗೆ ಕಡಿವಾಣ, ಆಧುನಿಕ ಪ್ರವಾಸೋದ್ಯಮಕ್ಕೆ ಮಾರಕ, ಟೌನ್‌ಶಿಫ್ ಮತ್ತು ಬಹುಮಹಡಿ ಕಟ್ಟಡಗಳಿಗೆ ನಿರ್ಬಂಧ, ವಾಣಿಜ್ಯಕರಣ ಮುಂತಾದ ನಿರ್ಬಂಧಕ್ಕೆ ಒಳಪಡುವದರಿಂದ ಗ್ರಾಮಸ್ಥರ ಜೀವನ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ ಅಭಿವೃದ್ಧಿಗೆ ಮಾರಕ ಉಂಟಾಗುವುದು ಎಂದು ಚರ್ಚೆಯ ಸಂದರ್ಭದಲ್ಲಿ ಸಚಿವರಿಗೆ ನಿಯೋಗವು ವಿಶ್ಲೇಷಿಸಿತು.

    300x250 AD

    ಸಚಿವ ಮಾದೇವಪ್ಪ, ಸತಿಶ್ ಜಾರಕಿಹೊಳಿ ಬೆಂಬಲ: ಜನಸಾಮಾನ್ಯರ ಅಭಿವೃದ್ಧಿಯ ದಿಶೆಯಲ್ಲಿ ಮಾರಕವಾಗುವ ಕಸ್ತೂರಿ ರಂಗನ್ ಜಾರಿಯನ್ನು ಸಂಪೂರ್ಣವಾಗಿ ವಿರೋಧಿಸಲಾಗುವುದು. ಅಲ್ಲದೇ, ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಕಸ್ತೂರಿ ರಂಗನ್ ಜಾರಿ ವಿರೋಧಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಾದೇವಪ್ಪ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬೆಂಬಲ ವ್ಯಕ್ತಪಡಿಸಿದರು ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಹಿರಿಯ ಹೋರಾಟಗಾರ ಜಿ.ಎಮ್ ಶೆಟ್ಟಿ ಅಚಿವೆ, ಜಿಲ್ಲಾ ಸಂಚಾಲಕರು ಹಾಗೂ ಅಚಿವೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ಶೆಟ್ಟಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಯಲ್ಲಾಪುರ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ನಿಯೋಗದ ನೇತೃತ್ವವನ್ನು ವಹಿಸಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top