ಶಿರಸಿ: ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯದ ಜನರಲ್ಲಿ ಸದ್ಭಾವನೆ ಉತ್ತೇಜಿಸಿ ಎಲ್ಲರಲ್ಲೂ ಸಮನ್ವಯತೆಯನ್ನು ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಆದೇಶದಂತೆ ಎಂ ಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸದ್ಭಾವನಾ ದಿನವನ್ನ ಆಚರಿಸಲಾಯಿತು. ಪ್ರಾಚಾರ್ಯ ಡಾ. ಟಿ. ಎಸ್. ಹಳೆಮನೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.