Slide
Slide
Slide
previous arrow
next arrow

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಯಲ್ಲಾಪುರ ತಾಲೂಕಿನ ರಿಕ್ಷಾ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

300x250 AD

ಯಲ್ಲಾಪುರ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಯಲ್ಲಾಪುರ ತಾಲೂಕಿನ ಆಟೋ ರಿಕ್ಷಾ, ಗೂಡ್ಸ್ ರಿಕ್ಷಾ, ಟ್ಯಾಕ್ಸಿ ಚಾಲಕ ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ, ಆಟೋರಿಕ್ಷಾ ಪಾಸಿಂಗ್ ಯೋಜನೆ, ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ಹಾಗೂ ಔತಣಕೂಟವನ್ನು ಆ.22, ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪಟ್ಟಣದ ಅಡಿಕೆ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಸಕ ಶಿವರಾಮ ಹೆಬ್ಬಾರ್ ಆಗಮಿಸಲಿದ್ದು, ಅಧ್ಯಕ್ಷತೆಯನ್ನು ಟ್ರಸ್ಟ್ ಸಂಸ್ಥಾಪಕ ಅನಂತಮೂರ್ತಿ ಹೆಗಡೆ ವಹಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟಿಲ್ ಘನ ಉಪಸ್ಥಿತಿ ನೀಡಲಿದ್ದು, ಮುಖ್ಯ ಅತಿಥಿಗಳಾಗಿ, ಉದ್ಯಮಿ ಪ್ರಮೋದ ಹೆಗಡೆ, ಸ್ಕೊಡವೇಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ ನಾಯ್ಕ್, ಉದ್ಯಮಿ ಡಿ.ಶಂಕರ್ ಭಟ್, ಉದ್ಯಮಿ ಬಾಲಕೃಷ್ಣ ನಾಯಕ,‌ಉತ್ತರಕನ್ನಡ ಹಾಗೂ ಹೊನ್ನಾವರ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಶಿವರಾಜ ಮೇಸ್ತಾ ಆಗಮಿಸಲಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮ ಚಂದಗಾಣಿಸಲು ಸಂಘಟಕರು ಕೋರಿದ್ದಾರೆ.

300x250 AD
Share This
300x250 AD
300x250 AD
300x250 AD
Back to top