ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಮುಗ್ವಾ ಶ್ರೀಸುಬ್ರಹ್ಮಣ್ಯ ದೇವಾಲಯಕ್ಕೆ ನಾಗರಪಂಚಮಿ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನಾಗಾರಾಧನೆಗೆ ಪುಣ್ಯ ಕ್ಷೇತ್ರವಾಗಿದ್ದು, ನಾಗರ ಪಂಚಮಿ ನಿಮಿತ್ತ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ ಸಾವಿರಾರು ಭಕ್ತಾದಿಗಳು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬೆಳಿಗ್ಗೆಯಿಂದ ರಾತ್ರಿ 8.30ರವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸರ್ವಾಭರಣ ಸೇವೆ, ನಾಗ ಮಂತ್ರಾಭಿಷೇಕ, ರುದ್ರಾಭಿಷೇಕ ಇತ್ಯಾದಿ ಸೇವೆಗಳು ನಡೆದವು.
ಮುಗ್ವಾ ಶ್ರೀಸುಬ್ರಹ್ಮಣ್ಯ ದೇವಾಲಯ ಚರ್ಮ ರೋಗ, ಸಂತಾನ ಅಪೇಕ್ಷೆಗಳಿಗೆ ಪುಣ್ಯ ಸ್ಥಳವಾಗಿದೆ. ಸಣ್ಣಪುಟ್ಟ ಕಾಯಿಲೆಗಳು ಬಂದಲ್ಲಿ ಸುಬ್ರಹ್ಮಣ್ಯನಿಗೆ ಬಾಳೆಗೊನೆ ಪೂಜೆ ಸಮರ್ಪಣೆ ಮಾಡಿದ್ದಲ್ಲಿ ಭಕ್ತರ ಮನೋಬಿಷ್ಠೆಗಳು ಸಿದ್ಧಿಸುತ್ತವೆ ಎನ್ನುವುದು ಭಕ್ತರ ನಂಬಿಕೆ ಇದೆ. ವಿವಿಧ ಜಿಲ್ಲೆ, ವಿವಿಧ ರಾಜ್ಯ ಹಾಗೂ ಸುತ್ತಮುತ್ತಲಿನ ಊರುಗಳ ಜನರೆಲ್ಲ ತಮ್ಮ ಸಂಕಷ್ಟಗಳನ್ನು ಪರಿಹರಿಸಿಕೊಳ್ಳುತ್ತಾರೆ. ವಿಶೇಷವಾಗಿ ಭಕ್ತರು ಹರಕೆ ಹಾಗೂ ಭಕ್ತಿಪೂರ್ವಕವಾಗಿ ನಾಗಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳವಾದ ‘ನಾಗಬನ’ವು ಇಲ್ಲಿ ಬಹಳ ಮಹತ್ವವನ್ನು ಪಡೆದುಕೊಂಡಿದೆ.
ಮು0ಜಾನೆಯಿoದಲೇ ಭಕ್ತರು ಆಗಮಿಸುತ್ತಿದ್ದು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ಭೋಜನ, ರಾತ್ರಿ ಪೂಜೆ ಜರುಗಲಿದೆ. ನಾಗಮೂರ್ತಿ ಪ್ರತಿಷ್ಠಾಪನೆ ಮಾಡಿದವರು ಈ ದಿನ ಆಗಮಿಸಿ ಪೂಜೆ ಸಲ್ಲಿಸುವ ಸಂಪದ್ರಾಯ ಈ ಹಿಂದಿನಿ0ದಲೂ ನಡೆದುಬಂದಿದೆ. ದೇವಾಲಯದ ಆಡಳಿತ ಮಂಡಳಿಯವರು ವಿವಿಧ ಸೇವಾ ಕೌಂಟರ್ ತೆರೆದು ಜನದಟ್ಟನೆ ಆಗದಂತೆ ಕ್ರಮ ವಹಿಸಿದ್ದರು. ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಪೊಲೀಸರು ಸ್ವಯಂ ಸೇವಕರು ಜನದಟ್ಟನೆ ಹಾಗೂ ಟ್ರಾಫಿಕ್ ಸಮಸ್ಯೆ ಉಂಟಾಗದAತೆ ನೋಡಿಕೊಂಡರು.