ದಾಂಡೇಲಿ: ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಆಗಸ್ಟ್ ೨೬ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ವಿನುತಾ ಕುಲಕರ್ಣಿ ಹಾಗೂ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕು ಸೇರಿದಂತೆ ಸುತ್ತಮುತ್ತಲ ಸಾರ್ವಜನಿಕರು ಭಾಗವಹಿಸಿ ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ನಗರದ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮೋಹನ್ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.