ದಾಂಡೇಲಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಲ್ಲಾ ಮಟ್ಟದ ಆಜೀವ ಸದಸ್ಯರ ಸಭೆ ಕರೆದು ವಾರ್ಷಿಕ ಲೆಕ್ಕಪತ್ರ ಮಂಡಿಸಿದ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ಕೆ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಲಿಖಿತ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
ಆ.6ರಂದು ದಾಂಡೇಲಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಭೆ ಕರೆದಿದ್ದ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆಯವರು ಆ ಸಭೆಯಲ್ಲಿ 2021-22 ಹಾಗೂ 2022-23 ನೇ ಸಾಲಿನ ಲೆಕ್ಕಪತ್ರವನ್ನು ಆಡಿಟ್ ವರದಿ ಸಹಿತ ಕಸಾಪ ಆಜೀವ ಸದಸ್ಯರು ಹಾಗೂ ಮಾಧ್ಯಮದವರ ಎದುರು ಮಂಡಿಸಿದ್ದರು. ಇದು ಆಜೀವ ಸದಸ್ಯರ ಹಾಗೂ ಜಿಲ್ಲೆಯ ಎಲ್ಲರ ಪ್ರಶಂಸೆಗೆ ಪಾತ್ರವಾಗಿತ್ತು. ಇದನ್ನು ಮಾದ್ಯಮಗಳ ವರದಿಯ ಮೂಲಕ ತಿಳಿದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯವನ್ನು ಶ್ಲಾಘಿಸಿ, ಅಭಿನಂದಿಸಿ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆಯವರಿಗೆ ಲಿಖಿತ ಪ್ರಶಂಸನಾ ಪತ್ರ ಬರೆದಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್. ವಾಸರೆಯವರ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನÀ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಸ್ವಾಗತಿಸಿ, ಅಭಿನಂದಿಸಿರುವುದರ ಜೊತೆಗೆ, ಇದು ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರಿಗೂ ಒಂದು ಮಾದರಿಯಾದ ಕಾರ್ಯವಾಗಿದೆ ಎಂದು ಪ್ರಶಂಸನಾ ಪತ್ರದಲ್ಲಿ ತಿಳಿಸಿದ್ದಾರೆ.