Slide
Slide
Slide
previous arrow
next arrow

ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ನಾಳೆ

300x250 AD

ಅಂಕೋಲಾ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ಕಾಲೇಜು), ಉಪನಿರ್ದೇಶಕರ ಕಾರ್ಯಾಲಯ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಆ.24ರಂದು ಜರುಗಲಿದೆ.
ತಾಲೂಕಿನ ಶೆಟಗೇರಿಯ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಮೈದಾನದಲ್ಲಿ ಜರುಗಲಿರುವ ಕ್ರೀಡಾಕೂಟವನ್ನು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಸತ್ಯಾಗ್ರಹ ಸ್ಮಾರಕ ಶಿಕ್ಷಣ ಸಮಿತಿಯ ರಮಾನಂದ ನಾಯಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು ಶೆಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿಧರ ನಾಯಕ ಧ್ವಜಾರೋಹಣ ನೆರವೇರಿಸಲಿದ್ದಾರೆ.
ರಾಷ್ಟ್ರೀಯ ಸತ್ಯಾಗ್ರಹ ಸ್ಮಾರಕ ಶಿಕ್ಷಣ ಸಮಿತಿಯ ಗೌರವಾಧ್ಯಕ್ಷ ಶಾಂತರಾಮ ನಾಯಕ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸತೀಶ್ ನಾಯ್ಕ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ್, ಉದ್ಯಮಿದಾರ ಮಂಗಲದಾಸ ಕಾಮತ್, ಖ್ಯಾತ ನಾಟಿ ವೈದ್ಯ ಹನುಮಂತ ಗೌಡ, ಶಿಕ್ಷಣ ಸಮಿತಿಯ ಕಾರ್ಯದರ್ಶಿ ಜಯರಾಮ ನಾಯಕ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ, ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ವಿಜಯದೀಪ, ಶಾಲೆಯ ಮುಖ್ಯ ಅಧ್ಯಾಪಕ ಎನ್.ವಿ. ರಾಥೋಡ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಮುಂಜಾನೆ 9:00ಗೆ ಕ್ರೀಡಾಕೂಟದ ಉದ್ಘಾಟನೆ ನೆರವಿರಲಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರೇಖಾ ರಾವ್, ಹಿರಿಯ ಉಪನ್ಯಾಸಕ ಮಹೇಶ ನಾಯಕ, ಕ್ರೀಡಾ ವಿಭಾಗದ ಸಂಚಾಲಕ ದೀಪಕ ನಾಯ್ಕ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top