Slide
Slide
Slide
previous arrow
next arrow

ಆರೋಗ್ಯ, ಶಿಕ್ಷಣ, ಔಷಧಿಗಳ ಕುರಿತು ಉಪನ್ಯಾಸ ಯಶಸ್ವಿ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

300x250 AD

ಶಿರಸಿ: ತಾಲೂಕಿನ ರಾಮನಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ, ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಶಿರಸಿ, ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಆ.26, ಶನಿವಾರದಂದು ದಿವೇಕರ್ ವಾಣಿಜ್ಯ ಮಹಾವಿದ್ಯಾಲಯ ಕಾರವಾರದ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಎಚ್. ನಾಯಕ ಔಷಧಿ ಸಸ್ಯಕ್ಕೆ ನೀರು ಹಾಕುವುದರ ಮುಖಾಂತರ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಲೆಯ ಎಸ್.ಡಿ.ಎಂ. ಸಿ. ಅಧ್ಯಕ್ಷ ಕೃಷ್ಣ ಕುರುಬರ್, ಗ್ರಾಮೀಣ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮ ನಡೆಸುವುದರ ಮಹತ್ವದ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ಮಹೇಶ್ ಡಿ ನಾಯಕ್ ವಹಿಸಿ ಔಷಧಿಗಳನ್ನು ಉಪಯೋಗಿಸುವ ಬಗ್ಗೆ ಮಾಹಿತಿಯನ್ನು ಕೊಟ್ಟರು. ಕಾರ್ಯಕ್ರಮದ ಅತಿಥಿಗಳಾಗಿ ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ತೋನ್ಸೆ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿದರು. ಮಾನವ ಹಕ್ಕುಗಳ ರಕ್ಷಣಾ ಪರಿಷತ್ (ರಿ.) ಉತ್ತರ ಕನ್ನಡ ಇದರ ಉಪಾಧ್ಯಕ್ಷ ಮಹೇಶ್ ಗಾಳಿಮನೆಯವರು ಉತ್ತಮ ಆಹಾರ ಸೇವನೆಯ ಬಗ್ಗೆ ಶಾಲಾ ಮಕ್ಕಳೊಡನೆ ಚರ್ಚಿಸಿದರು. ಉದ್ಘಾಟಕರಾದ ಬಿ.ಎಚ್. ನಾಯಕ ಶಾಲಾ ಮಕ್ಕಳಿಗೆ ಆರೋಗ್ಯ ಮತ್ತು ಜೀವನಶೈಲಿಯ ಬಗ್ಗೆ ಕಾರ್ಯಗಾರವನ್ನು ನೆರವೇರಿಸಿದರು.

300x250 AD

ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶಿಲ್ಪಾ ಶೇಟ್ ಮತ್ತು ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಲಕ್ಷ್ಮೀ ಸಿರಸಿಕರ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಗ್ರೀನ್ ಕೇರ್ ಸಂಸ್ಥೆಯ ಸದಸ್ಯರಾದ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಅಧಿಕಾರಿಯಾದ ಯಶವಂತ್ ನಾಯ್ಕ್ ಮತ್ತು ಜೆ.ಕೆ. ಎಂಟರ್ಪ್ರೈಸಸ್ ನ ವ್ಯವಸ್ಥೆಪಾಕರಾದ ಮಹಾಂತೇಶ್ ಪ್ರಭುದೇವ್ ಉಪಸ್ಥಿತರಿದ್ದರು ಶಾಲೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಕೊಟ್ಟು ಪ್ರಥಮ ಚಿಕಿತ್ಸೆಯ ಬಗ್ಗೆ ರಮೇಶ್ ನಾಯ್ಕ್ ವಿವರಿಸಿದರು. ಇಕೋ ಕೇರ್ ಸಂಸ್ಥೆಯ ಅಧ್ಯಕ್ಷ ಸುನಿಲ್ ಭೋವಿ ಎಲ್ಲರನ್ನೂ ಸ್ವಾಗತಿಸಿದರು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗೀತಾ ಜೋಗಳಕರ್ ಮಾತನಾಡಿ ಆರೋಗ್ಯದ ಬಗ್ಗೆ ಮಾಹಿತಿಯು ನಮ್ಮಂತ ಶಾಲೆಗಳಲ್ಲಿ ತುಂಬಾ ಅವಶ್ಯಕತೆ ಇದೆ ಮತ್ತು ಮುಂದಿನ ದಿನಗಳಲ್ಲಿ ಆರೋಗ್ಯದ ಮಾಹಿತಿಯ ಕಾರ್ಯಾಗಾರಗಳನ್ನು ನಡೆಸಬೇಕಾಗಿ ವಿನಂತಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಮತ್ತು ಪಾಲಕರು ಭಾಗವಹಿಸಿದ್ದರು. ರಮೇಶ್ ಬಿ. ನಾಯ್ಕ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Share This
300x250 AD
300x250 AD
300x250 AD
Back to top