• Slide
    Slide
    Slide
    previous arrow
    next arrow
  • ಶಿಕ್ಷಕ ನಾರಾಯಣ ಭಾಗ್ವತ್’ಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

    300x250 AD

    ಶಿರಸಿ: ಇಲ್ಲಿನ ಪ್ರತಿಷ್ಠಿತ ಶ್ರೀ ಮಾರಿಕಾಂಬಾ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ನಾರಾಯಣ ಭಾಗ್ವತ್ ಇವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯು ದೊರಕಿದೆ.

    ಮೂಲತಃ ಕುಮಟಾ ತಾಲೂಕಿನ ಹಂದಿಗೋಣದಲ್ಲಿ ಮೇ 16 ,1968 ರಲ್ಲಿ ಜನಿಸಿದ ನಾರಾಯಣ ಪಿ. ಭಾಗ್ವತ್ ಎಂ.ಎ., ಎಂ.ಇಡಿ. ಪದವೀಧರರಾಗಿರುವ ಇವರು ರಂಗ ಶಿಕ್ಷಣದಲ್ಲಿ ಡಿಪ್ಲೊಮಾ ಮಾಡಿದ್ದಾರೆ.
    ಕತೆ-ಕವನ-ನಾಟಕ ರಚನೆ , ಚಿತ್ರಕಲೆ , ಸಂಗೀತ , ನಾಟಕ ನಿರ್ದೇಶನ ಮತ್ತು ಅಭಿನಯ , ಉಪನ್ಯಾಸ , ರಜಾಶಿಬಿರಗಳ ಸಂಘಟನೆ , ಪೇಪರ್ ಕ್ರಾಫ್ಟ್ , ಹಾರ್ಮೋನಿಯಂ ವಾದನ , ನಾಟಕದ ವೇಷಭೂಷಣ ಮತ್ತು ವರ್ಣಾಲಂಕಾರ , ಯಕ್ಷಗಾನ , ಕರಕುಶಲ ಕಲೆ , ವಾಸ್ತು ಜ್ಞಾನ ಹೀಗೆ ಬಹುಮುಖಿ ಪ್ರತಿಭೆಯುಳ್ಳ, ಸಮಭಾವ – ಸದ್ಭಾವದೊಂದಿಗೆ ಎಲ್ಲರೊಂದಿಗೆ ಬೆರೆಯುವ ಸ್ನೇಹಜೀವಿಯಾಗಿದ್ದಾರೆ.

    300x250 AD

    ಬಹುತ್ವದ ನೆಲೆಯಲ್ಲಿ ತೆರೆದುಕೊಂಡ ಇವರಿಗೆ ಜನಗಣತಿಯ ಉತ್ತಮ ಕಾರ್ಯನಿರ್ವಹಣೆಗಾಗಿ ರಾಷ್ಟ್ರಪತಿಗಳ ಬೆಳ್ಳಿ ಪದಕ , ಕನ್ನಡ ರತ್ನ ಶಿಕ್ಷಕ ಪ್ರಶಸ್ತಿ , ಸುವರ್ಣ ಸಂಭ್ರಮ ಶಿಕ್ಷಕ ಪ್ರಶಸ್ತಿ , ಅತ್ಯುತ್ತಮ ಮಕ್ಕಳ ನಾಟಕ ನಿರ್ದೇಶಕ ಪ್ರಶಸ್ತಿ , ಅತ್ಯುತ್ತಮ ನಟ ,ತಾಲೂಕು ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ , ರಾಜ್ಯ ಜ್ಞಾನ ಸಿಂಧು ಪ್ರಶಸ್ತಿ , ನೇಶನ್ ಬ್ಯುಲ್ಡರ್ ಪ್ರಶಸ್ತಿ , ಕ.ಸಾ.ಪ. ತಾಲೂಕು ಪ್ರಶಸ್ತಿ , ರಾಜ್ಯ ಸಿರಿ ಕನ್ನಡ ನುಡಿ ಪ್ರಶಸ್ತಿ , ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ , ರಾಷ್ಟ್ರಮಟ್ಟದ ಉತ್ತಮ ನಾಟಕ ನಿರ್ದೇಶಕ ಪ್ರಶಸ್ತಿಯೂ ಸೇರಿದಂತೆ ಹತ್ತಾರು ಪ್ರಶಸ್ತಿ – ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ನೂರಾರು ಸಂಘ-ಸಂಸ್ಥೆಗಳು ಇವರನ್ನು ಸನ್ಮಾನಿಸಿ ಗೌರವಿಸಿದ್ದು, ಇದೀಗ ರಾಷ್ಟ್ರ ಮಟ್ಟದ ಪ್ರಶಸ್ತಿಯು ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top