ಶಿರಸಿ: ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರವಾರ, ಉತ್ತರ ಕನ್ನಡ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ, ಉತ್ತರ ಕನ್ನಡ ಜಿಲ್ಲೆ, ಆ. 26, ಶನಿವಾರದಂದು ಕುಮಟಾ ಗಿಬ್ ಹೈಸ್ಕೂಲಿನಲ್ಲಿ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಶಿರಸಿ ಲಯನ್ಸ್ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ಪೃಥ್ವಿ ಯು. ಹೆಗಡೆ ಹಾಗೂ ಕುಮಾರಿ ಸಮನ್ವಿತಾ ಟಿ.ಭಾಗವಹಿಸಿ ತೃತೀಯ ಸ್ಥಾನ ಗಳಿಸಿದ್ದಾರೆ.
ಇವರಿಗೆ ವಿಜ್ಞಾನ ಶಿಕ್ಷಕಿ ಶ್ರೀಮತಿ ಪವಿತ್ರಾ ನಾಯಕ್ ಮಾರ್ಗದರ್ಶನ ನೀಡಿದ್ದು, ಸಾಧನೆಗೈದ ವಿದ್ಯಾರ್ಥಿಗಳಿಗೆ,ವಿದ್ಯಾರ್ಥಿಗಳ ಸಾಧನೆಗೆ ಸಹಕರಿಸಿದ ಪಾಲಕರಿಗೆ, ತರಬೇತಿ ನೀಡಿದ ಶಿಕ್ಷಕರಿಗೆ, ಶಿರಸಿ ಲಯನ್ಸ ಕ್ಲಬ್ ಬಳಗ, ಶಿರಸಿ ಲಯನ್ಸ ಎಜುಕೇಷನ್ ಸೊಸೈಟಿ ಆಡಳಿತ ಮಂಡಳಿ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.