Slide
Slide
Slide
previous arrow
next arrow

ಸ್ವರ್ಣವಲ್ಲೀ ಶ್ರೀಗಳ ಪಾದಪೂಜೆ ಗೈದು, ಆಶೀರ್ವಾದ ಪಡೆದ ಅನಂತಮೂರ್ತಿ ಹೆಗಡೆ

300x250 AD

ಶಿರಸಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಅನಂತಮೂರ್ತಿ ಹೆಗಡೆ ದಂಪತಿಗಳು ತಾಲೂಕಿನ ಸೋಂದಾ, ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಚಾತುರ್ಮಾಸ ಅಂಗವಾಗಿ ಪಾದಪೂಜೆ ಮತ್ತು ಭಿಕ್ಷಾ ವಂದನಾ ಸೇವೆ ಸಲ್ಲಿಸಿ, ಶ್ರೀಗಳಿಂದ ಮಂತ್ರಾಕ್ಷತೆ ಪಡೆದು ಶ್ರೀಗಳ ಕೃಪಾಕಟಾಕ್ಷಕ್ಕೆ ಪಾತ್ರರಾದರು.

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಮೂಲಕ ಜಿಲ್ಲೆಯ ಆಟೋ ಚಾಲಕರ ಸಮಸ್ಯೆಗಳಿಗೆ ಧ್ವನಿಯಾಗಿ, ಆಟೋ ರಕ್ಷಕನಾಗಿ ಗುರುತಿಸಿಕೊಂಡಿರುವುದರ ಜೊತೆಗೆ ಸರ್ಕಾರಿ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಇನ್ನಿತರ ಸಾರ್ವಜನಿಕ ಕೇಂದ್ರಗಳಿಗೆ ನೀರಿನ ಘಟಕ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ನೀಡುವುದರ ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top