ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ರಕ್ಷಾ ಬಂಧನದ ಉಡುಗೊರೆಯಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
“ಎಲ್ಲಾ ಬಳಕೆದಾರರಿಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡಲು ಪ್ರಧಾನಿ ಮೋದಿ ನಿರ್ಧರಿಸಿದ್ದು, ಇದು ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಉಡುಗೊರೆ” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
14 ಕೆಜಿ ಎಲ್‌ಜಿಪಿ ಸಿಲಿಂಡರ್‌ನ ಪ್ರಸ್ತುತ ಬೆಲೆ ಸುಮಾರು 1,100 ರೂಪಾಯಿ. ಪ್ರಸ್ತುತ, 14 ಕೆಜಿ ಎಲ್‌ಪಿಜಿ ಸಿಲಿಂಡರ್ ಮುಂಬೈನಲ್ಲಿ ರೂ 1,052.5, ಚೆನ್ನೈನಲ್ಲಿ ರೂ 1,068.5 ಮತ್ತು ಕೋಲ್ಕತ್ತಾದಲ್ಲಿ ರೂ 1,079 ಆಗಿದೆ.
ಜುಲೈನಲ್ಲಿ ತೈಲ ಕಂಪನಿಗಳು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 50 ರೂ.ಗಳಷ್ಟು ಹೆಚ್ಚಿಸಿವೆ. ಈ ಹಿಂದೆ ಮೇ ತಿಂಗಳಲ್ಲಿ ಎರಡು ಬಾರಿ ಬೆಲೆಯನ್ನು ಹೆಚ್ಚಿಸಲಾಗಿತ್ತು.
PMUY ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಮೇ 2016 ರಲ್ಲಿ ಪ್ರಾರಂಭಿಸಿದರು ಮತ್ತು ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳ ಮಹಿಳೆಯರಿಗೆ 50 ಮಿಲಿಯನ್ LPG ಸಂಪರ್ಕಗಳನ್ನು ವಿತರಿಸುವ ಗುರಿಯನ್ನು ಹೊಂದಿದೆ.