ಭಟ್ಕಳ: ಶ್ರೀನಾರಾಯಣ ಗುರು ಜಯಂತ್ಯೋತ್ಸವದ ಅಂಗವಾಗಿ ಇಲ್ಲಿನ ಶ್ರೀನಾರಾಯಣ ಗುರು ಜಯಂತ್ಯೋತ್ಸವ ಸಮಿತಿ ವತಿಯಿಂದ ಸೆ.6ರಂದು ನಗರದ ಸೋನಾರಕೇರಿ ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಸರಕಾರಿ/ ಖಾಸಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.
ಸಾಮಾಜಿಕ ಪರಿವರ್ತನೆಯಲ್ಲಿ ಶ್ರೀ ನಾರಾಯಣ ಗುರುಗಳ ಪಾತ್ರ ಎಂಬ ವಿಷಯದೊಂದಿಗೆ ಭಾಷಣ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಒಂದು ಶಾಲೆಯಿಂದ ಓರ್ವ ವಿದ್ಯಾರ್ಥಿಗೆ ಅವಕಾಶ ನೀಡಲಾಗಿದೆ. ಭಾಷಣದ ಮಿತಿ 6 ನಿಮಿಷವಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೀಡಲು ಸೆ.4 ಕೊನೆಯ ದಿನಾಂಕವಾಗಿದೆ. ಸೆ.10ರಂದು ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ಸಭಾಭವನದಲ್ಲಿ ನಡೆಯುವ ನಾರಾಯಣಗುರು ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಶ್ರೀ ನಾರಾಯಣಗುರು ಜಯಂತ್ಯೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಭವಾನಿಶಂಕರ ನಾಯ್ಕ (ಮೊ.ಸಂ.:TEL:+919972282923), ಮನಮೋಹನ ನಾಯ್ಕ (ಮೊ.ಸಂ.:TEL:+919980431987), ಗಂಗಾಧರ ನಾಯ್ಕ (ಮೊ.ಸಂ.:TEL:+918310093198), ನಾರಾಯಣ ನಾಯ್ಕ (ಮೊ.ಸಂ.:TEL:+919448729426) ಸಂಪರ್ಕಿಸಲು ಕೋರಲಾಗಿದೆ.