• Slide
  Slide
  Slide
  previous arrow
  next arrow
 • ಸೆ.3ಕ್ಕೆ ರಾಜ್ಯಮಟ್ಟದ ಸ್ವರಾಜ್ಯ ಕವಿಗೋಷ್ಠಿ

  300x250 AD

  ಶಿರಸಿ: ರಾಜ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಸೆ.3 ರಂದು ಶಿರಸಿಯಲ್ಲಿ ರಾಜ್ಯ ಮಟ್ಟದ ಸ್ವರಾಜ್ಯ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ತಿಳಿಸಿದರು.

  ಶಿರಸಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಗರದ ಶ್ರೀ ರಾಘವೇಂದ್ರ ಮಠದ ಸಭಾ ಭವನದಲ್ಲಿ ಸೆ.3 ರ ಬೆಳಗ್ಗೆ 10 ಗಂಟೆಯಿಂದ ಸ್ವರಾಜ್ಯ-ಸುರಾಜ್ಯ ವಿಷಯದಡಿ ಸ್ವರಾಜ್ಯ ಕವಿಗೋಷ್ಠಿ ನಡೆಯಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ರಾಜ್ಯ ಉಪಾಧ್ಯಕ್ಷರಾದ ಹಾಗೂ ವಿಸ್ತಾರ ನ್ಯೂಸ್ ಪ್ರಧಾನ ಸಂಪಾದಕರಾದ ಹರಿಪ್ರಕಾಶ್ ಕೋಣೆಮನೆ ಕವಿಗೋಷ್ಠಿ ಉದ್ಘಾಟಿಸಿ, ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ. ಸಂಸ್ಕೃತ ಅಧ್ಯಾಪಕರು ಹಾಗೂ ಕವಿಗಳಾದ ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ.

  ರಾಜ್ಯದ ಬಹುತೇಕ ಜಿಲ್ಲಾ ಕೇಂದ್ರದಲ್ಲಿ ಇದೇ ವಿಷಯದಲ್ಲಿ ಕವಿಗೋಷ್ಠಿ ಯಶಸ್ವಿಯಾಗಿ ನಡೆದಿದ್ದು ಮೂರು ಕವಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕವಿಗೋಷ್ಠಿಯಲ್ಲಿ 25 ಕವಿಗಳಿಗೆ ವಾಚನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಜೇತರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ರಾಜ್ಯ ಉಪಾಧ್ಯಕ್ಷ, ಹರಿಪ್ರಕಾಶ್ ಕೋಣೆಮನೆ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

  300x250 AD

  ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಜಗದೀಶ್ ಭಂಡಾರಿ, ಶಂಕರ್ ಭಟ್ ಇದ್ದರು

  Share This
  300x250 AD
  300x250 AD
  300x250 AD
  Leaderboard Ad
  Back to top