Slide
Slide
Slide
previous arrow
next arrow

ಭೀಮಣ್ಣ ನಾಯ್ಕ್ ಗೆಲುವು: ಹರಕೆ ತೀರಿಸಿದ ಕಾನಗೋಡು ಕಾಂಗ್ರೆಸ್

300x250 AD

ಸಿದ್ದಾಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭೀಮಣ್ಣ ನಾಯ್ಕ ಗೆಲುವು ಸಾಧಿಸಿದರೆ ಗ್ರಾಮದ ದೇವಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದಾಗಿ ತಾಲೂಕಿನ ಕಾನಗೋಡಿನ ಕಾಂಗ್ರೆಸ್ ಘಟಕದ ವತಿಯಿಂದ ಸಂಕಲ್ಪ ಮಾಡಿಕೊಂಡoತೆ ಮಂಗಳವಾರ 101 ಸುಳಿಗಾಯಿ ಒಡೆದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕಳೆದ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಅಭ್ಯರ್ಥಿ ಭೀಮಣ್ಣ ನಾಯ್ಕ ಶಾಸಕರಾಗಿ ಆಯ್ಕೆಯಾದರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಕಾನಗೋಡು ಗ್ರಾಮ ಪಂಚಾಯತ ಕಾಂಗ್ರೆಸ್ ಘಟಕದ ವತಿಯಿಂದ ಬೇಡಿಕೊಂಡ0ತೆ ಮಂಗಳವಾರ ದೇವಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ಭೀಮಣ್ಣ ನಾಯ್ಕ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ದೇವಸ್ಥಾನ ಸಮಿತಿ ಅಧ್ಯಕ್ಷ ಗಣಪತಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ,ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಕೆ.ಶಿವಾನಂದ, ಶಂಕರ ನಾಯ್ಕ, ಕಾನಗೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಿ.ಐ.ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top