Slide
Slide
Slide
previous arrow
next arrow

ಮರಕ್ಕೆ ಇನೋವಾ ಕಾರು ಡಿಕ್ಕಿ: ಓರ್ವ ಮೃತ

300x250 AD

ಅಂಕೋಲಾ:ತಾಲೂಕಿನ ಸರಳೇಬೈಲ್ ಬಳಿ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು,ಇನ್ನೋರ್ವ ಗಂಭೀರ ಗಾಯಗೊಂಡಿದ್ದು,, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

300x250 AD

ಹೈದ್ರಾಬಾದಿನಿಂದ ಗೆಳೆಯರು ( AP 29 AY 0011 ) ಇನೋವಾ ಕಾರಿನಲ್ಲಿ ಅಂಕೋಲಾ ಮಾರ್ಗವಾಗಿ ಗೋಕರ್ಣ, ಗೋವಾ ಮತ್ತಿತರೆಡೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅಂಕೋಲಾದ ಸರಳೇಬೈಲ್ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಅಂಚಿನ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ.

Share This
300x250 AD
300x250 AD
300x250 AD
Back to top