• Slide
  Slide
  Slide
  previous arrow
  next arrow
 • ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

  300x250 AD

  ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆ, ಇಸಳೂರಿನಲ್ಲಿ ಆಗಸ್ಟ 29, ಮಂಗಳವಾರದಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.

  ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ನಿವೃತ್ತ ದೈಹಿಕ ಶಿಕ್ಷಕ ಅಶೋಕ ಭಜಂತ್ರಿ ಮಾತನಾಡಿ, ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವಂತೆ ಪ್ರೇರೇಪಿಸಿದರು. ಭಾರತದ ಹೆಮ್ಮೆಯ ಹಾಕಿ ಆಟಗಾರರಾದ ಮೇಜರ ಧ್ಯಾನಚಂದರವರನ್ನು ಸ್ಮರಿಸಿ, ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಣೆ ಮಾಡಿದರು.

  300x250 AD

  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀನಿಕೇತನ ಶಾಲೆಯ ಪ್ರಾಂಶುಪಾಲರಾದ ವಸಂತ ಭಟ್ ಮಾತನಾಡಿ ತಮ್ಮನ್ನು ತಾವು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಿಂದಿಡಲು ಕ್ರೀಡೆಯು ಅತ್ಯಗತ್ಯ ಎಂದು ಮಕ್ಕಳಿಗೆ ಸಲಹೆ ನೀಡಿದರು. ಅತಿಥಿಗಳಿಗೆ ಶಾಲು ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

  Share This
  300x250 AD
  300x250 AD
  300x250 AD
  Leaderboard Ad
  Back to top