Slide
Slide
Slide
previous arrow
next arrow

ಸೆ.4ಕ್ಕೆ ಮುಂಡಗೋಡ ಅರಣ್ಯವಾಸಿಗಳ ಸಭೆ

300x250 AD

ಮುಂಡಗೋಡ: ತಾಲೂಕಾ ಅರಣ್ಯವಾಸಿಗಳ ಸಭೆಯನ್ನು ಸೆ.4 ಸೋಮವಾರ ಮುಂಜಾನೆ 10.30ಕ್ಕೆ ಮುಂಡಗೋಡ ತಾಲೂಕಿನ ಪ್ರವಾಸಿ ಮಂದಿರದಲ್ಲಿ(ಐಬಿ) ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವಿಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅರಣ್ಯವಾಸಿಗಳಿಗೆ ಗುರುತಿನ ಪತ್ರ(ಐಡಿ ಕಾರ್ಡ)ವಿತರಿಸುವುದು, ಬೆಂಗಳೂರಿನಲ್ಲಿ ಸೆ.4 ರಂದು ನಡೆಯುವ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದಲ್ಲಿನ ಪೋಟೋ ಪ್ರದರ್ಶನದ ಕುರಿತು ಚರ್ಚಿಸುವುದು, ಅರಣ್ಯ ಹಕ್ಕು ಮಂಜೂರಿ ಕುರಿತು ರಾಜ್ಯ ಸರಕಾರದ ಸಂಬಂಧಿಸಿದ ಹಿರಿಯ ಸಚಿವರೊಂದಿಗೆ ಸಂವಾದ ಏರ್ಪಡಿಸುವ ಕುರಿತು, ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಉಸ್ತುವಾರಿ ಸಚಿವ ಮಂಕಾಳ ವೈಧ್ಯರೊಂದಿಗೆ ಚರ್ಚಿಸುವ ಕುರಿತು ಸಭೆಯಲ್ಲಿ ತಿಳಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

300x250 AD

 ತಾಲೂಕ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಶಿವಾನಂದ ಜೋಗಿ ಅಧ್ಯಕ್ಷತೆಯಲ್ಲಿ ಜರಗುವ ಸಭೆಗೆ ಆಸಕ್ತರು ಆಗಮಿಸಬೇಕಾಗಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Share This
300x250 AD
300x250 AD
300x250 AD
Back to top