ಹೊನ್ನಾವರ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಪಕ್ಕದ ಅಂಗಡಿಗೆ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಸರಕು ತುಂಬಿನ ಕಂಟೇನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ ರಭಸಕ್ಕೆ ಗೋಡೆ ಕುಸಿದು ಅಪಾರ ಹಾನಿ ಸಂಭವಿಸಿದೆ. ಅಂಗಡಿಯಲ್ಲಿನ ಸಾಮಗ್ರಿಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.