ಕುಮಟಾ: ತಾಲೂಕಿನ ಬಗ್ಗೋಣ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಅಭಿಯಾನಕ್ಕೆ ಭಾನುವಾರ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ, ಪರಿಶೀಲಿಸಿದರು.
ನಂತರ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಚರ್ಚಿಸಿ, ವ್ಯಾಕ್ಸಿನ್ ಪೂರೈಕೆಯ ಕುರಿತು ಮಾಹಿತಿ ಪಡೆದರು. ಅಲ್ಲದೇ, ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದು, ಕೊರೊನಾ ವಿರುದ್ಧ ಹೋರಾಡಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ, ಸದಸ್ಯೆ ಶೈಲಾ ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಾಯಕ ನಾಯ್ಕ, ವಿಶ್ವನಾಥ ನಾಯ್ಕ, ಮಹಿಳಾ ಮೋರ್ಚಾದ ಜಯಾ ಶೇಟ್, ಗೌರಿ ವೈದ್ಯ ಸೇರಿದಂತೆ ಮತ್ತಿತತರು ಇದ್ದರು