• Slide
    Slide
    Slide
    previous arrow
    next arrow
  • ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನ: ಸಂಸದ ಹೆಗಡೆ ಸಂತಾಪ

    300x250 AD

    ಹೊನ್ನಾವರ: ತಾಲೂಕಿನ ಉತ್ಸಾಹಿ ಸಾಮಾಜಿಕ ಕಾರ್ಯಕರ್ತ, ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ತಮ್ಮ 53ನೇ ವಯಸ್ಸಿನಲ್ಲಿ ದೀರ್ಘಕಾಲೀನ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಸಾಮಾಜಿಕ ಕಾರ್ಯಕರ್ತರೂ ಹಾಗೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತರಾದ ಸುಬ್ರಮಣ್ಯ ಶಾಸ್ತ್ರಿ ಯವರು ನಮ್ಮನ್ನಗಲಿದ ಸುದ್ದಿ ತಿಳಿದು ಮನಸ್ಸಿಗೆ ತುಂಬಾ ನೋವುಂಟಾಯಿತು ಎಂದು ಸಂಸದ ಅನಂತಕುಮಾರ ಹೆಗಡೆ ತಿಳಿಸಿದ್ದಾರೆ.
    ಸರಳ, ಸಜ್ಜನ ವ್ಯಕ್ತಿತ್ವದ ಇವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡುತ್ತ ಬಂದಿದ್ದರು. ಅವರ ಆತ್ಮಕ್ಕೆ ಸದ್ಗತಿಯನ್ನೂ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸುತ್ತಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top